ಗ್ವಾಲಿಯರ್ (ಮಧ್ಯಪ್ರದೇಶ): ಬಿಜೆಪಿ ಮತ್ತು ಭಜರಂಗದಳದ ಕೆಲವು ಪದಾಧಿಕಾರಿಗಳು ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐ ಜತೆ ಸೇರಿ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಿಎಂ ದಿಗ್ವಿಜಯ ಸಿಂಗ್ ಆರೋಪಿಸಿದರು.
ಹಣ ಪಡೆದು ಪಾಕ್ ಪರ ಬೇಹುಗಾರಿಕೆ: ಬಿಜೆಪಿ, ಭಜರಂಗದಳದ ವಿರುದ್ಧ ದಿಗ್ವಿಜಯ್ ಸಿಂಗ್ ಆರೋಪ
ಬಿಜೆಪಿಯವರು ರಾಷ್ಟ್ರೀಯತೆ ಮತ್ತು ಪಾಕಿಸ್ತಾನದ ವಿರುದ್ಧದ ಹೋರಾಟದ ಕುರಿತು ಮಾತನಾಡುತ್ತಿರುತ್ತಾರೆ. ತಮ್ಮವರೇ ಪಾಕ್ನ ಐಎಸ್ಐನಿಂದ ಹಣ ಪಡೆದು ಗೂಢಚರ್ಯೆ ನಡೆಸುತ್ತಿದ್ದಾರೆ. ಇದು ಯಾವ ರೀತಿಯ ರಾಷ್ಟ್ರೀಯತೆ ಎಂಬುದು ನಮಗೆ ತಿಳಿಯುತಿಲ್ಲ ಎಂದು ಸುದ್ದಿಗೋಷ್ಟಿಯಲ್ಲಿ ದಿಗ್ವಿಜಯ ಸಿಂಗ್ ದೂರಿದರು.
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು ರಾಷ್ಟ್ರೀಯತೆ ಮತ್ತು ಪಾಕಿಸ್ತಾನದ ವಿರುದ್ಧದ ಹೋರಾಟದ ಕುರಿತು ಮಾತನಾಡುತ್ತಿರುತ್ತಾರೆ. ತಮ್ಮವರೇ ಪಾಕ್ನ ಐಎಸ್ಐನಿಂದ ಹಣ ಪಡೆದು ಗೂಢಚರ್ಯೆ ನಡೆಸುತ್ತಿದ್ದಾರೆ. ಇದು ಯಾವ ರೀತಿಯ ರಾಷ್ಟ್ರೀಯತೆ ಎಂಬುದು ನಮಗೆ ತಿಳಿಯುತಿಲ್ಲ ಎಂದು ಕಿಡಿಕಾರಿದರು.
ಕಳೆದ ಎರಡು ತಿಂಗಳಲ್ಲಿ 80 ಲಕ್ಷಕ್ಕೂ ಅಧಿಕ ಜನ ತಮ್ಮ ಮನೆಗಳಲ್ಲಿ ಜೈಲುವಾಸ ಅನುಭವಿಸುತ್ತಿದ್ದಾರೆ. ಸಂವಿಧಾನವನ್ನು ನಂಬುವ ನಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು. ಹನಿ ಟ್ರ್ಯಾಪಿಂಗ್ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ತಪ್ಪಿತಸ್ಥರೆಂದು ಪರಿಗಣಿಸಲ್ಪಟ್ಟವರಿಗೆ ಶಿಕ್ಷೆಯಾಗಲಿದೆ ಎಂದರು.