ಮುಂಬೈ: ಭಾರತೀಯರ ಖಾಸಗಿತನಕ್ಕೆ ನಮೋ ಆ್ಯಪ್ ಧಕ್ಕೆ ಉಂಟುಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಹಿರಿಯ ಮುಖಂಡ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವ ಪೃಥ್ವಿರಾಜ್ ಚವ್ಹಾಣ್ ಅದನ್ನು ನಿಷೇಧಿಸುವಂತೆ ಆಗ್ರಹಿಸಿದ್ದಾರೆ.
ಜನರ ಖಾಸಗಿತನಕ್ಕೆ ಧಕ್ಕೆ ಉಂಟುಮಾಡುವ 'ನಮೋ ಆ್ಯಪ್' ನಿಷೇಧಿಸಿ: ಪೃಥ್ವಿರಾಜ್ ಚವ್ಹಾಣ್ - ಪೃಥ್ವಿರಾಜ್ ಚವ್ಹಾಣ್
ಚೀನಾದ 59 ಆ್ಯಪ್‌ಗಳನ್ನು ಬ್ಯಾನ್ ಮಾಡಿ ಭಾರತ ಸರ್ಕಾರ ಆದೇಶ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಮಾಜಿ ಸಚಿವ ಪೃಥ್ವಿರಾಜ್ ಚವ್ಹಾಣ್, ಮೊದಲು ನಮೋ ಆ್ಯಪ್ ನಿಷೇಧಿಸಿ ಎಂದು ಹೇಳಿದ್ದಾರೆ.
ಚೀನಾದ 59 ಆ್ಯಪ್‌ಗಳನ್ನು ನಿಷೇಧಿಸುವ ಮೂಲಕ 130 ಕೋಟಿ ಭಾರತೀಯರ ಮಾಹಿತಿ ಗೌಪ್ಯತೆಯನ್ನು ಮೋದಿ ಸರ್ಕಾರ ಕಾಪಾಡುತ್ತಿರುವುದು ಒಳ್ಳೆಯ ವಿಚಾರ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ಮೊಬೈಲ್ ಫೋನ್ ಅಪ್ಲಿಕೇಶನ್ ಆಗಿರುವ ನಮೋ ಆ್ಯಪ್, ಗೌಪ್ಯತೆ ಸೆಟ್ಟಿಂಗ್‌ಗಳನ್ನು ಬಳಕೆದಾರರಿಗೆ ತಿಳಿಯದಂತೆ ರಹಸ್ಯವಾಗಿ ಬದಲಾಯಿಸುತ್ತದೆ. ಅಲ್ಲದೇ ಅಮೆರಿಕದ ಕೆಲ ಕಂಪನಿಗಳಿಗೆ ಡೇಟಾವನ್ನು ಕಳುಹಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಆರೋಪಿಸಿದ್ದಾರೆ.
ಪೂರ್ವ ಲಡಾಖ್ನ ಗಾಲ್ವಾನ್ ಗಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 22 ಭಾರತೀಯ ಯೋಧರು ಹುತಾತ್ಮರಾದ ಬಳಿಕ ಚೀನಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡುವಂತೆ ದೇಶದೆಲ್ಲೆಡೆ ಕೂಗು ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ರಾಷ್ಟ್ರೀಯ ಭದ್ರತೆ ಮತ್ತು ಗೌಪ್ಯತೆ ದೃಷ್ಟಿಯಿಂದ ಭಾರತ ಸರ್ಕಾರ ಸೋಮವಾರ ಟಿಕ್ ಟಾಕ್, ಯುಸಿ ಬ್ರೌಸರ್ ಸೇರಿದಂತೆ ಚೀನಾದ 59 ಆ್ಯಪ್‌ಗಳನ್ನು ಬ್ಯಾನ್ ಮಾಡಿ ಆದೇಶ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೃಥ್ವಿರಾಜ್ ಚವ್ಹಾಣ್, ಮೊದಲು ನಮೋ ಆ್ಯಪ್ ನಿಷೇಧಿಸಿ ಎಂದು ಒತ್ತಾಯಿಸಿದ್ದಾರೆ.