ಕರ್ನಾಟಕ

karnataka

ETV Bharat / bharat

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕ ಸಹಚರರ ಬಂಧನ - undefined

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಬಂಡಿಪೋರಾ ಪೊಲೀಸರು ಇಬ್ಬರು ಭಯೋತ್ಪಾದಕ ಸಹಚರರನ್ನು ಬಂಧಿಸಿದ್ದಾರೆ. ಜೊತೆಗೆ, ಅವರ ಬಳಿ ಇದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕ ಸಹಚರರ ಬಂಧನ

By

Published : Jul 25, 2019, 10:34 PM IST

ಜಮ್ಮು-ಕಾಶ್ಮೀರ:

ಉಗ್ರರಿಗೆ ಸಹಾಯ ಮಾಡುತ್ತಿದ್ದ ಸಹಚರರನ್ನು ಭದ್ರತಾ ಪಡೆಗಳೊಂದಿಗೆ ಬಂಡಿಪೋರಾ ಪೊಲೀಸರು ಬಂಧಿಸಿದ್ದಾರೆ.

ಭಯೋತ್ಪಾದಕ ಸಹಚರರು ಹಲವು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಇಟ್ಟುಕೊಂಡಿದ್ದು ಸದ್ಯ ಪೊಲೀಸರು ಭದ್ರತಾ ಪಡೆಗಳ ಸಹಾಯದಿಂದ ಅವುಗಳನ್ನು ವಶಪಡಿಸಿಕೊಂಡಿದ್ದಾರೆ.

ಅಲ್ಲದೇ, ಭಯೋತ್ಪಾದಕರು ಗಡಿ ನುಸುಳುವಿಕೆಯನ್ನು ಇವರು ಸುಲಭ ಮಾಡುತ್ತಿದ್ದರು. ಜೊತೆಗೆ ಉಗ್ರರಿಗೆ ಬೇಕಿರುವ ಸರಕು ಸಾಮಗ್ರಿಗಳನ್ನು ಒದಗಿಸುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ಅವರಲ್ಲಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಡಿಪೋರಾ ಪೊಲೀಸರು ಬಂಧಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details