ಫಿರೋಜಾಬಾದ್:ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವ ಭರದಲ್ಲಿರುವ ಉತ್ತರ ಪ್ರದೇಶ ಪೊಲೀಸರು ಯಡವಟ್ಟು ಮಾಡಿಕೊಂಡಿದ್ದಾರೆ.
ಸಿಎಎ ವಿರೋಧಿ ಪ್ರತಿಭಟನೆ ಹಿನ್ನೆಲೆ ಫಿರೋಜಾಬಾದ್ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಉತ್ತರ ಪ್ರದೇಶ ಪೊಲೀಸರು ಗಲಭೆಗೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ಸಂಬಂಧ 200 ಜನರನ್ನು ಗುರುತಿಸಿ ಅವರಿಗೆ ನೋಟಿಸ್ ಕಳುಹಿಸಿದ್ದರು. ಆದರೆ ಈ ಪೈಕಿ 6 ವರ್ಷಗಳ ಹಿಂದೆ ನಿಧನರಾದ ಬನ್ನೆ ಖಾನ್ ಎಂಬವರ ಹೆಸರೂ ಇದೆ!