ನವದೆಹಲಿ :ರಾಷ್ಟ್ರರಾಜಧಾನಿಯಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಸಲೂನ್ಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೆ, ಸ್ಪಾ ತೆರೆಯುವಂತಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
ನಗರದಲ್ಲಿ ನಾಲ್ಕು ಚಕ್ರ, ದ್ವಿಚಕ್ರ ವಾಹನ, ಆಟೋರಿಕ್ಷಾಗಳು, ಇ-ರಿಕ್ಷಾಗಳು ಮತ್ತು ಇತರ ವಾಹನಗಳಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸಂಖ್ಯೆಗೆ ಯಾವುದೇ ನಿರ್ಬಂಧಗಳಿಲ್ಲ. ಈ ಹಿಂದೆ ಇದಕ್ಕೆ ನಿರ್ಬಂಧ ಹೇರಲಾಗಿದ್ದು, ಅದನ್ನು ಈಗ ತೆರವುಗೊಳಿಸಲಾಗಿದೆ.
ಆರ್ಥಿಕತೆಯ ದೃಷ್ಟಿಯಿಂದ ಹಂತ ಹಂತವಾಗಿ ಲಾಕ್ಡೌನ್ ಸಡಿಲಿಕೆ ಮಾಡಲು ಕೇಂದ್ರ ಸರ್ಕಾರ ಶನಿವಾರ ಸೂಚಿಸಿತ್ತು. ಅದರಂತೆ ದೆಹಲಿ ಸರ್ಕಾರ ಲಾಕ್ಡೌನ್ ಸಡಿಲಿಕೆ ಮಾಡುತ್ತಿದೆ ಎಂದರು.
ಈವರೆಗೆ ಮಾರುಕಟ್ಟೆ, ಅಂಗಡಿಗಳನ್ನು ಬೆಸ-ಸಮ ಆಧಾರದ ಮೇಲೆ ತೆರೆಯಲು ಅನುಮತಿಸಲಾಗುತ್ತಿದೆ ಎಂದರು. ಈಗ ನಗರದ ಎಲ್ಲಾ ಅಂಗಡಿಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಕೈಗಾರಿಕೆಗಳ ಕಾರ್ಯನಿರ್ವಹಣೆಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಇದೇ ವೇಳೆ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.