ಕರ್ನಾಟಕ

karnataka

ETV Bharat / bharat

ಈ ಜಿಲ್ಲೆಯಲ್ಲಿ ಕೊರನಾಗೆ ಮೊದಲ ಬಲಿ... ಆತಂಕದಲ್ಲಿ ಜನ - ಉತ್ತರ ಪ್ರದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು ಎಂಟು ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇದೀಗ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.

death
ಕೊರನಾಗೆ ಮೊದಲ ಬಲಿ

By

Published : Apr 29, 2020, 4:49 PM IST

ಬರೇಲಿ(ಉತ್ತರ ಪ್ರದೇಶ):ಕೊರೊನಾ ವೈರಸ್​​ ಸೋಂಕಿಗೆ ಒಳಗಾಗಿದ್ದ 35 ವರ್ಷದ ವ್ಯಕ್ತಿಯೊಬ್ಬ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಇದು ಬರೇಲಿ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಉಂಟಾದ ಮೊದಲ ಬಲಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ಸೋಂಕಿತ ರೋಗಿಯನ್ನು ಶನಿವಾರ ಜಿಲ್ಲಾ ಆಸ್ಪತ್ರೆಗೆ ಕರೆತಂದು ನಂತರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ವಾರಂಟೈನ್​​ ಮಾಡಿ ಚಿಕಿತ್ಸೆ ನೀಡಲಾಗಿತ್ತು ಎಂದು ಸಿಎಂಒ ತಿಳಿಸಿದೆ.

ಬರೇಲಿ ಜಿಲ್ಲೆಯಲ್ಲಿ ಇದೂವರೆಗೆ ಒಟ್ಟು ಎಂಟು ಸಕಾರಾತ್ಮಕ ಪ್ರಕರಣಗಳು ವರದಿಯಾಗಿವೆ. ಆರು ಜನರು ಚೇತರಿಸಿಕೊಂಡಿದ್ದು, ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಇನ್ನೋರ್ವ ವ್ಯಕ್ತಿ ಈಗ ಸಾವನ್ನಪ್ಪಿದ್ದಾರೆ ಎಂದು ಸಿಎಂಒ ಮಾಹಿತಿ ನೀಡಿದೆ.

ABOUT THE AUTHOR

...view details