ನವದೆಹಲಿ:ಮಹಿಳೆಯರ ಐಪಿಎಲ್ ಕ್ರಿಕೆಟ್ ಕ್ರೀಡಾಕೂಟ ನಡೆಸಲು ಸಜ್ಜಾಗಿದ್ದೇವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟಪಡಿಸಿದ್ದು, ಮಹಿಳಾ ಕ್ರಿಕೆಟರ್ಗಳನ್ನು ಕಡೆಗಣಿಸಲಾಗಿದೆ ಎನ್ನುವ ಆರೋಪಗಳಿಗೆ ತೆರೆ ಎಳೆದಿದ್ದಾರೆ.
ಭಾರತದಲ್ಲಿ ಕೊರೊನಾ ಸೋಂಕಿನ ಕಾರಣಕ್ಕೆ ದುಬೈನಲ್ಲಿ ಪುರುಷರ ಐಪಿಎಲ್ ಪಂದ್ಯಾವಳಿಗಳು ಸೆಪ್ಟೆಂಬರ್ 19ರಿಂದ ನವೆಂಬರ್ 8ರವರೆಗೆ ನಡೆಯಲಿದ್ದು, ಮಹಿಳೆಯರ ಐಪಿಎಲ್ ಪಂದ್ಯಗಳಿಗೆ ಬಿಸಿಸಿಐ ಒತ್ತು ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಹೇಳಿಕೆ ನೀಡಿದ್ದಾರೆ.