ಕರ್ನಾಟಕ

karnataka

ETV Bharat / bharat

ಬೆಂಗಳೂರಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ತಲೆಯೆತ್ತಲಿದೆ ಬಿಸಿಸಿಐ ಕ್ಯಾಂಪಸ್​

ಭಾರತೀಯ ಕ್ರಿಕೆಟ್​​ನಲ್ಲಿ ಮತ್ತಷ್ಟು ಬದಲಾವಣೆ ತರಲು ಬಿಸಿಸಿಐ ಮುಂದಾಗಿದೆ. ಅದಕ್ಕಾಗಿ ಬೆಂಗಳೂರಿನಲ್ಲಿ ಬರೋಬ್ಬರಿ 500 ಕೋಟಿ ರೂ ವೆಚ್ಚದಲ್ಲಿ ಹೊಸ ಕೇಂದ್ರ ನಿರ್ಮಾಣಕ್ಕೆ ಯೋಜನೆ​ಯೊಂದನ್ನು ಹಾಕಿಕೊಂಡಿದೆ.

Centre of Excellence
Centre of Excellence

By

Published : Jan 31, 2020, 10:31 PM IST

ಬೆಂಗಳೂರು:ಭಾರತೀಯ ಕ್ರಿಕೆಟ್​​ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸೌರವ್​ ಗಂಗೂಲಿ ಈಗಾಗಲೇ ಭಾರತೀಯ ಕ್ರಿಕೆಟ್​​ನಲ್ಲಿ ಅನೇಕ ಬದಲಾವಣೆಗಳನ್ನು ತಂದಿದ್ದಾರೆ. ಇದೀಗ ಮತ್ತೊಂದು ಮಹತ್ವದ ಯೋಜನೆ ಹಾಕಿಕೊಂಡು ಕೋಟ್ಯಂತರ ರೂ. ವೆಚ್ಚ ಮಾಡಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ಜತೆ(ಎನ್​ಸಿಎ) ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ಅನ್ನು ಬೆಂಗಳೂರಿನಲ್ಲೇ ಅಂದಾಜು 500 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಯೋಜನೆ ಸಿದ್ಧಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

500 ಕೋಟಿ ರೂ. ವೆಚ್ಚದಲ್ಲಿ ಬಿಸಿಸಿಐ ಕ್ಯಾಂಪಸ್​

ಮುಂದಿನ ಎರಡು ವರ್ಷಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ. ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿಗೆ ಪರ್ಯಾಯವಾಗಿ ಈ ಸೆಂಟರ್​ ಆಫ್​ ಎಕ್ಸಲೆನ್ಸ್​​​ ಕೆಲಸ ನಿರ್ವಹಿಸಲಿದ್ದು, ಇದರ ಉಸ್ತುವಾರಿಯನ್ನ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಹುಲ್​ ದ್ರಾವಿಡ್​​ ನೋಡಿಕೊಳ್ಳಲಿದ್ದಾರೆ. ಇದರೊಂದಿಗೆ ಕೆಲ ವೈದ್ಯಕೀಯ ಸಂಸ್ಥೆಗಳು ಸಹ ಕೆಲಸ ಮಾಡಲಿವೆ. ಸೆಂಟರ್​​ ಆಫ್​ ಎಕ್ಸ​​ಲೆನ್ಸ್​​​​​​​​​​ನಲ್ಲಿ ವಿವಿಧ ದೇಶಗಳ ಮಾದರಿಯಲ್ಲಿ 4 ಮೈದಾನಗಳಿರಲಿದ್ದು, ಅದರೊಳಗೆ ಕ್ರಿಕೆಟರ್ಸ್​ಗೆ ತರಬೇತಿ ನೀಡಲಾಗುವುದು.

ಈ ಸೆಂಟರ್​​ಗಾಗಿ ಈಗಾಗಲೇ ಬೆಂಗಳೂರಿನ ಹೊರವಲಯ ದೇವನಹಳ್ಳಿಯಲ್ಲಿ 40 ಎಕರೆ ಜಮೀನು ಖರೀದಿಸಲಾಗಿದ್ದು, ಅಲ್ಲೇ ಈ ಕೇಂದ್ರ​ ತಲೆ ಎತ್ತಲಿದೆ ಎಂದು ತಿಳಿದು ಬಂದಿದೆ.

ABOUT THE AUTHOR

...view details