ತಿರುವನಂತಪುರಂ: ಸೋಷಿಯಲ್ ಮೀಡಿಯಾದಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಯೂಟ್ಯೂಬ್ ಬ್ಲಾಗರ್ ವಿಜಯ್ ಪಿ ನಾಯರ್ ಅವರ ಮೇಲೆ ಹಲ್ಲೆ ನಡೆಸಿದ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ತಂಪನೂರಿನಲ್ಲಿ ಪೊಲೀಸರು ಭಾಗ್ಯಲಕ್ಷ್ಮಿ ವಿರುದ್ಧ ಕಳ್ಳತನ ಪ್ರಕರಣ ಮತ್ತು ತೃತೀಯ ಲಿಂಗಿಗಳ ಹಕ್ಕುಗಳ ಹೋರಾಟಗಾರ್ತಿ ದಿಯಾ ಸನಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ಅವರ ಮೇಲೆ ಹಲ್ಲೆ ಮತ್ತು ಅಶ್ಲೀಲ ಭಾಷೆ ಬಳಸಿದ ಆರೋಪವೂ ಇದೆ.