ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಭಾರತದಲ್ಲೂ ಲಸಿಕೆ ತಯಾರಾಗುತ್ತಿದ್ದು, ಹೈದರಾಬಾದ್ ಮೂಲದ ಭಾರತ ಬಯೋಟೆಕ್ನಿಂದ ಅಭಿವೃದ್ಧಿಗೊಳ್ಳುತ್ತಿರುವ ಕೊರೊನಾ ವ್ಯಾಕ್ಸಿನ್ ಇದೀಗ ಎರಡನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಅನುಮತಿ ನೀಡಲಾಗಿದೆ.
ಐಸಿಎಂಆರ್ ಸಹಯೋಗದಲ್ಲಿ ಭಾರತ್ ಬಯೋಟೆಕ್ನಿಂದ ಕೋವಿಡ್ ವ್ಯಾಕ್ಸಿನ್ ತಯಾರಿಸಲಾಗುತ್ತಿದ್ದು, ಈಗಾಗಲೇ ಮೊದಲನೇ ಹಂತದ ಪ್ರಯೋಗ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದರಿಂದ ಎರಡನೇ ಹಂತದ ಪ್ರಯೋಗ ಆರಂಭಗೊಳ್ಳಲಿದೆ. ಸೋಮವಾರದಿಂದ ಈ ಪ್ರಯೋಗ ಆರಂಭಗೊಳ್ಳಲಿದೆ ಎಂದು ಸಂಸ್ಥೆ ಹೇಳಿದೆ. ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮತ್ತು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಸಹಭಾಗಿತ್ವದಲ್ಲಿ ಕೋವಿಡ್- 19 ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿದೆ.