ಕರ್ನಾಟಕ

karnataka

ETV Bharat / bharat

ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿದ ಭಾರತ್ ಬಯೋಟೆಕ್ - ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ ಕೋವಿಡ್​ ವ್ಯಾಕ್ಸಿನ್​

ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಕೊರೊನಾ ವೈರಸ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿದ ಕೆಲ ದಿನಗಳ ನಂತರ, ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಲಸಿಕೆಯ ತುರ್ತು ಬಳಕೆಯ ಅಧಿಕಾರಕ್ಕಾಗಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ)ಗೆ ಅರ್ಜಿ ಸಲ್ಲಿಸಿದೆ.

Bharat Biotech seeks emergency use nod for Covid vaccine
ಡಿಸಿಜಿಐ ಗೆ ಅರ್ಜಿ

By

Published : Dec 8, 2020, 9:40 AM IST

ನವದೆಹಲಿ:ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕೋವಿಡ್ -19 ಲಸಿಕೆ 'ಕೊವಾಕ್ಸಿನ್'ನ ತುರ್ತು ಬಳಕೆಗೆ ಅನುಮತಿ ಕೋರಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ)ಗೆ ಅರ್ಜಿ ಸಲ್ಲಿಸಿದೆ.

ಕೋವಿಡ್ -19 ಕೋವಾಕ್ಸಿನ್ ಅನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್‌ಐವಿ) ಸಹಯೋಗದೊಂದಿಗೆ ಭಾರತ್ ಬಯೋಟೆಕ್‌ ಅಭಿವೃದ್ಧಿಪಡಿಸುತ್ತಿದೆ.

ವಿಶ್ವದ ಅತಿದೊಡ್ಡ ಲಸಿಕೆ ತಯಾರಕರಾದ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತನ್ನ ಲಸಿಕೆಯ ತುರ್ತು ಬಳಕೆಯ ಅನುಮತಿಗಾಗಿ ಇತ್ತೀಚೆಗೆ ಸರ್ಕಾರದ ಅನುಮೋದನೆ ಕೋರಿದೆ.

ಕೋವಾಕ್ಸಿನ್​​ ಅನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮತ್ತು ಬ್ರಿಟಿಷ್ ಔಷಧ ತಯಾರಕ ಅಸ್ಟ್ರಾಜೆನೆಕಾ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಅಮೆರಿಕದ ಸಂಸ್ಥೆ ಫೈಜರ್ ತನ್ನ ಲಸಿಕೆಗಾಗಿ ಔಷಧ ನಿಯಂತ್ರಕರಿಂದ ಅನುಮೋದನೆ ಪಡೆದಿದೆ.

ಸಾರ್ವಜನಿಕ ಆರೋಗ್ಯ ತುರ್ತು ಸಂದರ್ಭಗಳಲ್ಲಿ ಲಸಿಕೆಗಳು ಸೇರಿದಂತೆ ಇತರ ವೈದ್ಯಕೀಯ ಸಾಮಗ್ರಿಗಳ ಲಭ್ಯತೆ ಮತ್ತು ಬಳಕೆಯನ್ನು ಸುಗಮಗೊಳಿಸುವ ಒಂದು ಕಾರ್ಯವಿಧಾನವೇ ಈ ತುರ್ತು ಬಳಕೆಯ ಅಧಿಕಾರ.

ಓದಿ:ಕೊವಾಕ್ಸಿನ್ ಲಸಿಕೆ ‘ಅಸಮರ್ಥತೆ’ ಕುರಿತ ಊಹಾಪೋಹಕ್ಕೆ ತೆರೆ ಎಳೆದ ವೈದ್ಯರು: ಹೀಗಿದೆ ಸ್ಪಷ್ಟನೆ

ನವೆಂಬರ್ 16 ರಂದು ಭಾರತ್ ಬಯೋಟೆಕ್ ಲಸಿಕೆಯ ಮೂರನೇ ಹಂತದ ಪ್ರಯೋಗಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿತ್ತು. ಈ ಪ್ರಯೋಗಗಳಲ್ಲಿ ಐಸಿಎಂಆರ್ ಸಹಭಾಗಿತ್ವದಲ್ಲಿ ಭಾರತದಾದ್ಯಂತ 26,000 ಸ್ವಯಂಸೇವಕರು ಭಾಗವಹಿಸಿದ್ದರು. ಇದು ಭಾರತದಲ್ಲಿ ಕೋವಿಡ್ -19 ಲಸಿಕೆಗಾಗಿ ನಡೆಸಿದ ಅತಿದೊಡ್ಡ ಕ್ಲಿನಿಕಲ್ ಪ್ರಯೋಗವಾಗಿದೆ. ಕೋವಿಡ್‌ ಲಸಿಕೆ ಅಭಿವೃದ್ಧಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಹೈದರಾಬಾದ್‌ನ ಭಾರತ್ ಬಯೋಟೆಕ್ ಸಂಸ್ಥೆಗೆ ಭೇಟಿ ನೀಡಿದ್ದನ್ನು ಇಲ್ಲಿ ನೆನಪಿಸಬಹುದು.

ABOUT THE AUTHOR

...view details