ಅಹಮದಾಬಾದ್: ಗುಜರಾತ್‌ನ ಭರೂಚ್ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ ರಾಜೀನಾಮೆ ನೀಡಿದ್ದಾರೆ. ಸಂಸದ ಮನ್ಸುಖ್ ವಾಸವ ಅವರು ಇತ್ತೀಚೆಗೆ ತಮ್ಮ ಹೇಳಿಕೆಗಳಿಂದ ಸುದ್ದಿಯಲ್ಲಿದ್ದರು. ರಾಮ ಜನ್ಮಭೂಮಿ ವಿವಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಿಂದ 'ನಮ್ಮ ಪರವಾಗಿ' ತೀರ್ಪು ನೀಡಿದೆ. ಏಕೆಂದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.
ಕಾಂಗ್ರೆಸ್ ಪಕ್ಷ ಈ ಹೇಳಿಕೆಯನ್ನು ಖಂಡಿಸಿ ವಾಸವ ಅವರು ಕ್ಷಮೆ ಯಾಚಿಸುವಂತೆ ಆಗ್ರಹಿಸಿತ್ತು. ವಾಸವ ಜನರಲ್ಲಿ ಕೋಮು ಉದ್ವೇಗವನ್ನು ಪ್ರಚೋದಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಓದಿ: ಧಾರ್ಮಿಕ ಸ್ವಾತಂತ್ರ್ಯ ವಿಧೇಯಕಕ್ಕೆ ಮಧ್ಯಪ್ರದೇಶ ಸಂಪುಟ ಅಸ್ತು
ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಗುಜರಾತ್ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಮನ್ಸುಖ್ ವಾಸವ ಬಿಜೆಪಿ ಪಕ್ಷ ತೊರೆದಿದ್ದಾರೆ. ಅಲ್ಲದೆ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ನಿನ್ನೆ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಅವರಿಗೆ ಬರೆದ ಪತ್ರದಲ್ಲಿ, ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭಾ ಸ್ಪೀಕರ್ ಅವರನ್ನು ಭೇಟಿಯಾಗಿ, ಭರೂಚ್ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ವಾಸವ ತಿಳಿಸಿದ್ದರು.