ಕರ್ನಾಟಕ

karnataka

ETV Bharat / bharat

ಭೀಮ್ ಆರ್ಮಿ ಮುಖ್ಯಸ್ಥ ಹೈದರಾಬಾದ್​​ ಪೊಲೀಸರ ವಶಕ್ಕೆ - ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಪೊಲೀಸರು ನಿನ್ನೆ ವಶಕ್ಕೆ ಪಡೆದಿದ್ದಾರೆ.

Bhim Army Chief Chandrashekhar Azad
ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ

By

Published : Jan 27, 2020, 8:55 AM IST

ಹೈದರಾಬಾದ್: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.

ಪೌರತ್ವ ತಿದ್ದಿಪಡಿ ಕಾಯ್ದೆ (ಸಿಎಎ) ಹಾಗೂ (ಎನ್​ಆರ್​ಸಿ) ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಹೈದರಾಬಾದ್​ನಲ್ಲಿ ಕೆಲವು ಸಂಘಟನೆಗಳು ಕಾರ್ಯಕ್ರಮ ಆಯೋಜಿಸಿದ್ದವು. ಈ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ಈ ಪ್ರತಿಭಟನಾ ಕಾರ್ಯಕ್ರಮಕ್ಕೆ ಅನುಮತಿ ನೀಡಿರಲಿಲ್ಲ. ಆದರೂ ಕಾರ್ಯಕ್ರಮ ಆಯೋಜಿಸಲಾಗಿದೆ. ಹಾಗಾಗಿ ಚಂದ್ರಶೇಖರ್ ಆಜಾದ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮುನ್ನಾ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧಿತರಾಗಿದ್ದ ಆಜಾದ್‌, ಇತ್ತೀಚೆಗಷ್ಟೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ಪೊಲೀಸರು ಆಜಾದ್ ಅವರನ್ನು ವಶಕ್ಕೆ ಪಡೆದಿದ್ದಾರೆ.

For All Latest Updates

TAGGED:

ABOUT THE AUTHOR

...view details