ಅಯೋಧ್ಯೆ: ಆಗಸ್ಟ್ 5ರಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರ ಭೂಮಿ ಪೂಜೆಯ ನೇರಪ್ರಸಾರ ದೂರದರ್ಶನದಲ್ಲಿ ಬಿತ್ತರಗೊಳ್ಳಲಿದೆ ಎಂದು ರಾಮ ಮಂದಿರ ಟ್ರಸ್ಟ್ ಮಾಹಿತಿ ನೀಡಿದೆ.
ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಈ ಮಾಹಿತಿ ನೀಡಿದ್ದಾರೆ. ಜತೆಗೆ ಭೂಮಿ ಪೂಜೆ ಕಾರ್ಯಕ್ರಮದ ವೇಳೆ ಜನರು ಹತ್ತಿರದ ದೇವಸ್ಥಾನಕ್ಕೆ ಹೋಗಿ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ.
ದೂರದರ್ಶನದಲ್ಲಿ ಅಯೋಧ್ಯೆ ಭೂಮಿ ಪೂಜೆ ನೇರ ಪ್ರಸಾರ ದೇಶಾದ್ಯಂತ ಕೋವಿಡ್ ಅಬ್ಬರ ಜೋರಾಗಿರುವ ಕಾರಣ ಹೆಚ್ಚಿನ ಸಂಖ್ಯೆಯ ಭಕ್ತರು ಅಯೋಧ್ಯೆಯಲ್ಲಿ ಸೇರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ದೂರದರ್ಶನದಲ್ಲಿ ಪ್ರಸಾರ ಮಾಡಲು ನಿರ್ಧಾರ ಕೈಗೊಳ್ಳಲಾಗಿದ್ದು, ಮನೆಯಿಂದಲೇ ಇದರ ವೀಕ್ಷಣೆ ಮಾಡಬಹುದು ಎಂದು ತಿಳಿಸಿದ್ದಾರೆ.
ಆಗಸ್ಟ್ 5ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಭೂಮಿ ಪೂಜೆ ಕಾರ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿಯಾಗಲಿದ್ದು, ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ ಹಾಗೂ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ 300ಕ್ಕೂ ಅಧಿಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.