ಕರ್ನಾಟಕ

karnataka

ETV Bharat / bharat

ಪಕ್ಷದ ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್​ - ಪಕ್ಷದ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ

ಅನಾರೋಗ್ಯದಿಂದ ಬಳಲುತ್ತಿದ್ದರೂ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭೋಪಾಲ್ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್​ ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.

Bhopal: BJP MP Sadhvi Pragya faints at party event
ಕುಸಿದು ಬಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ

By

Published : Jun 23, 2020, 12:46 PM IST

ಭೋಪಾಲ್​: ಮಧ್ಯ ಪ್ರದೇಶದ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಶ್ಯಾಮ್​ ಪ್ರಸಾದ್ ಮುಖರ್ಜಿ ಅವರ ಪುಣ್ಯತಿಥಿ ಸಮಾರಂಭದಲ್ಲಿ ಭೋಪಾಲ್ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್​, ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.

ಪಕ್ಷದ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್​

ಇದಕ್ಕೂ ಮೊದಲು ವಿಡಿಯೋವೊಂದರಲ್ಲಿ ಸಾಧ್ವಿ ಪ್ರಜ್ಞಾ, ತಮ್ಮ ಆರೋಗ್ಯ ಹದಗೆಟ್ಟಿದ್ದು, ದೃಷ್ಟಿ ಹೀನತೆಯಿಂದ ಕೂಡ ಬಳಲುತ್ತಿರುವುದಾಗಿ ಹೇಳಿದ್ದರು. ದೆಹಲಿಯ ಏಮ್ಸ್​ನಲ್ಲಿ ಕ್ಯಾನ್ಸರ್ ಮತ್ತು ಕಣ್ಣಿನ ಸಮಸ್ಯೆಗಾಗಿ ಚಿಕಿತ್ಸೆ ಪಡೆದಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದರೂ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂಸದೆ ಇದೀಗ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಅಲ್ಲಿ ನೆರೆದಿದ್ದವರು ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ABOUT THE AUTHOR

...view details