ನವದೆಹಲಿ: ಕಳೆದ 24 ಗಂಟೆಗಳಲ್ಲಿ 4,987 ಹೊಸ ಕೊರೊನಾ ಪ್ರಕರಣಗಳು ದಾಖಲಾಗುವ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90,927ಕ್ಕೆ ಏರಿಕೆಯಾಗಿದೆ. ಇನ್ನು 120 ಮೃತಪಟ್ಟಿದ್ದು, ಸಾವಿನ ಸಂಖ್ಯೆ 2872ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ 34,109 ಮಂದಿ ಗುಣಮುಖರಾಗಿದ್ದು, 53,946 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.