ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ರಾಜ್ಯದ 243 ಕ್ಷೇತ್ರಗಳಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ಅಕ್ಟೋಬರ್ 28 ರಂದು ಮೊದಲ ಹಂತ, ನವೆಂಬರ್ 3 ರಂದು ಎರಡನೇ ಹಂತ ಹಾಗೂ ನವೆಂಬರ್ 7 ರಂದು 3ನೇ ಹಂತದ ಚುನಾವಣೆ ನಡೆಯಲಿದೆ. ನ.10 ರಂದು ಮತಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಫಲಿತಾಂಶ ಘೋಷಣೆಯಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಮಾಹಿತಿ ನೀಡಿದ್ದಾರೆ.