ಪಾಟ್ನಾ:2021ರಲ್ಲಿ ಜಾತಿ ಆಧಾರಿತ ಜನಗಣತಿಯನ್ನು ಬೆಂಬಲಿಸುವ ನಿರ್ಣಯವನ್ನು ಬಿಹಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಬಿಹಾರದಲ್ಲಿ ಜಾತಿ ಆಧಾರಿತ ಜನಗಣತಿಗೆ ಬೆಂಬಲ: ಇಂದಿನ ಅಧಿವೇಶನದಲ್ಲಿ ನಿರ್ಣಯ ಅಂಗೀಕಾರ - ಮುಖ್ಯಮಂತ್ರಿ ನಿತೀಶ್ ಕುಮಾರ್
ಬಿಹಾರದ ವಿಧಾನಸಭೆ ಅಧಿವೇಶನದಲ್ಲಿ 2021ರಲ್ಲಿ ಜಾತಿ ಆಧಾರಿತ ಜನಗಣತಿ ಬೆಂಬಲಿಸುವ ನಿರ್ಣಯವನ್ನು ಕೈಗೊಳ್ಳಲಾಯಿತು.
ಬಿಹಾರದಲ್ಲಿ ಜಾತಿ ಆಧಾರಿತ ಜನಗಣತಿಗೆ ಬೆಂಬಲ:
ಸ್ಪೀಕರ್ ವಿಜಯ್ ಕುಮಾರ್ ಚೌಧರಿ ವಿಧಾನಸಭೆ ಅಧಿವೇಶನದಲ್ಲಿ ಈ ಕುರಿತು ಘೋಷಣೆ ಮಾಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ಸದನದಲ್ಲಿ ಪ್ರಸ್ತಾವನೆ ಸಲ್ಲಿಸಿದ್ದರು ಎಂದು ಚೌಧರಿ ಹೇಳಿದ್ದಾರೆ.