ಪಾಟ್ನಾ(ಬಿಹಾರ): ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಯನ್ನು ಬಿಹಾರದಲ್ಲಿ ಜಾರಿಗೊಳಿಸದಂತೆ ಶಾಸನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರವಿರುವ ಬಿಹಾರದಲ್ಲೂ ಎನ್‌ಆರ್‌ಸಿ ವಿರುದ್ಧ ನಿರ್ಣಯ! - ಶಾಸನಸಭೆಯಲ್ಲಿ ನಿರ್ಣಯ ಅಂಗೀಕಾರ
ಕಾಂಗ್ರೆಸ್ ಮತ್ತು ಇತರೆ ಪ್ರಾದೇಶಿಕ ಪಕ್ಷಗಳು ಇರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಆದ್ರೆ, ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರವಿರುವ ಬಿಹಾರದಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಶಾಸನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಶಾಸನಸಭೆಯಲ್ಲಿ ನಿರ್ಣಯ ಅಂಗೀಕಾರ
ಆದರೆ, 2010 ರಲ್ಲಿ ನಡೆದಿರುವಂತೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ(ಎನ್ಪಿಆರ್) ಪ್ರಕ್ರಿಯೆ ನಡೆಸಲು ಯಾವುದೇ ಅಡ್ಡಿಯಿಲ್ಲ ಎನ್ನುವ ತೀರ್ಮಾನ ತೆಗೆದುಕೊಳ್ಳಲಾಗಿದೆ.
ವಿಧಾನಸಭೆಯಲ್ಲಿ ಇಂದು ಈ ಬಗ್ಗೆ ತೀವ್ರ ಚರ್ಚೆ ನಡೆಯಿತು.