ಕರ್ನಾಟಕ

karnataka

ETV Bharat / bharat

ಬಿಹಾರ ವಿಧಾನಸಭೆ ಚುನಾವಣೆಯ ಮತದಾನ ಆರಂಭ: ಮತ ಚಲಾಯಿಸಿದ ರಾಜ್ಯಪಾಲರು - Bihar byelection voting Begun

ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಆರಂಭವಾಗಿದ್ದು, ಪಾಟ್ನಾದ ದಿಘಾದಲ್ಲಿರುವ ಸರ್ಕಾರಿ ಶಾಲೆಯಲ್ಲಿನ ಮತದಾನ ಕೇಂದ್ರದಲ್ಲಿ ರಾಜ್ಯಪಾಲ ಫಾಗು ಚೌಹಾಣ್​ ಬಿಹಾರ ಚುನಾವಣೆಯ ಮತ ಚಲಾಯಿಸಿದರು.

ಬಿಹಾರ ವಿಧಾನಸಭೆ ಚುನಾವಣೆ ಮತದಾನ ಆರಂಭ
ಬಿಹಾರ ವಿಧಾನಸಭೆ ಚುನಾವಣೆ ಮತದಾನ ಆರಂಭ

By

Published : Nov 3, 2020, 7:47 AM IST

Updated : Nov 3, 2020, 8:05 AM IST

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಆರಂಭವಾಗಿದೆ. 17 ಜಿಲ್ಲೆಗಳ 94 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಶುರುವಾಗಿದೆ. ಮತದಾರರು ಬಿಹಾರದ ಅಧಿಕಾರ ಚುಕ್ಕಾಣಿ ಹಿಡಿಯುವ ಪಕ್ಷ ಯಾವುದೆಂಬುದನ್ನು ನಿರ್ಧರಿಸಲಿದ್ದಾರೆ.

ಇಂದು 2.86 ಕೋಟಿ ಮತದಾರರು 1,463 ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆ ಸೇರಲಿದೆ. ಕೊರೊನಾ ಹಿನ್ನೆಲೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಮತಗಟ್ಟೆಗಳಲ್ಲಿ ಕೈಗೊಳ್ಳಲಾಗಿದೆ. 94 ಕ್ಷೇತ್ರಗಳ ಪೈಕಿ ಆರ್‌ಜೆಡಿಯ ತೇಜಸ್ವಿ ಯಾದವ್‌ ಹಾಗೂ ತೇಜ್‌ ಪ್ರತಾಪ್‌ ಯಾದವ್‌ ಅವರ ವಿಧಾನ ಸಭಾ ಕ್ಷೇತ್ರಗಳಿಗೂ ಇಂದು ಮತದಾನ ನಡೆಯಲಿದೆ.

ಪಾಟ್ನಾದ ದಿಘಾದಲ್ಲಿರುವ ಸರ್ಕಾರಿ ಶಾಲೆಯಲ್ಲಿನ ಮತದಾನ ಕೇಂದ್ರದಲ್ಲಿ ರಾಜ್ಯಪಾಲ ಫಾಗು ಚೌಹಾಣ್​ ಬಿಹಾರ ಚುನಾವಣೆಯ ಇಂದು ಮತ ಚಲಾಯಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣೆಯಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದರು. ಮತದಾನದ ಶೇಕಡಾವಾರು ಪ್ರಮಾಣವು ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Last Updated : Nov 3, 2020, 8:05 AM IST

ABOUT THE AUTHOR

...view details