ಕರ್ನಾಟಕ

karnataka

ETV Bharat / bharat

ಬಿಹಾರ ಸಿಎಂ ನಿತೀಶ್​ ಕುಮಾರ್​ಗೆ ಕೊರೊನಾ ನೆಗೆಟಿವ್:​ ಸೊಸೆಗೆ ಪಾಸಿಟಿವ್​..! - ಬಿಹಾರದಲ್ಲಿ ಕೊರೊನಾ

ಬಿಹಾರ ಸಿಎಂ ನಿತೀಶ್​ ಕುಮಾರ್ ಸೊಸೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಿಎಂ ನಿವಾಸವನ್ನು ಸದ್ಯಕ್ಕೆ ಸ್ಯಾನಿಟೈಸ್​ ಮಾಡಲಾಗಿದ್ದು, ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ.

bihar cm nitish kumar
ಬಿಹಾರ ಸಿಎಂ ನಿತೀಶ್​ ಕುಮಾರ್

By

Published : Jul 7, 2020, 12:31 PM IST

ಪಾಟ್ನಾ ( ಬಿಹಾರ): ರಾಷ್ಟ್ರಾದ್ಯಂತ ಕೊರೊನಾ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬಿಹಾರದಲ್ಲೂ ಕೂಡಾ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ಸಿಎಂ ನಿತೀಶ್​ ಕುಮಾರ್ ಅವರ ಸೊಸೆಗೂ ಕೂಡಾ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಸೋಂಕಿತೆಯನ್ನು ಪಾಟ್ನಾದ ಏಮ್ಸ್​ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಸಿಎಂ ನಿತೀಶ್​ ಕುಮಾರ್ ನಿವಾಸಕ್ಕೆ ಸ್ಯಾನಿಟೈಸಿಂಗ್ ಮಾಡಲಾಗಿದ್ದು, ಕುಟುಂಬದ ಸದಸ್ಯರೆಲ್ಲರನ್ನೂ ಕ್ವಾರಂಟೈನ್​ ಮಾಡಲಾಗಿದೆ.

ಕೆಲವು ದಿನಗಳ ಹಿಂದೆ ಬಿಹಾರದ ಬಿಜೆಪಿ ನಾಯಕನಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಎಂ ಸೇರಿದಂತೆ ಎಲ್ಲರಿಗೂ ಕೂಡಾ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ, ಸಿಎಂ ನಿತೀಶ್ ಕುಮಾರ್​​ ಅವರ ಸೋಂಕು ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು.

ಈಗ ಸದ್ಯಕ್ಕೆ ಬಿಹಾರದಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,125ಕ್ಕೆ ಏರಿಕೆಯಾಗಿದ್ದು, ಈವರೆಗೆ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ. 8,997 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 3031 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details