ಪಾಟ್ನಾ: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಿಹಾರದ 243 ಕ್ಷೇತ್ರಗಳ ಪೈಕಿ ಇಂದು ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ವೋಟಿಂಗ್ ಆರಂಭಗೊಂಡಿದೆ.
ಕೊರೊನಾ ವೈರಸ್ ಹಾವಳಿ ನಡುವೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಶಾಂತಿಯುತ ಮತದಾನಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಎಲ್ಲಾ ರೀತಿಯ ಯೋಜನೆ ರೂಪಿಸಿದೆ. 16 ಜಿಲ್ಲೆಗಳ 71 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ವೋಟಿಂಗ್ ಮಾಡಲಿದ್ದಾರೆ.