ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ಸೀಟು ಹಂಚಿಕೆಯ ಲೆಕ್ಕಾಚಾರ ಆರಂಭವಾಗಿದೆ. ಎನ್‌ಡಿಎ ಭಾಗವಾಗಿರುವ ಲೋಕ್ ಜನಶಕ್ತಿ ಪಕ್ಷ (ಎಲ್‌ಜೆಪಿ)ಕ್ಕೆ 22 ಸೀಟುಗಳನ್ನು ಮಾತ್ರ ನೀಡಲಾಗುತ್ತದೆ. ಬಿಜೆಪಿ ಈ ಭಾರಿ 122 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಜೆಡಿಯು ಹಾಗೂ ಬಿಜೆಪಿ ಸೀಟು ಹಂಚಿಕೆ ವೇಳೆ ಎಲ್‌ಜೆಪಿಯನ್ನು ಕಡೆಗಣಿಸಲಾಗುತ್ತದೆ ಎನ್ನಲಾಗಿದೆ. ಆಡಳಿತ ಪಕ್ಷದಲ್ಲಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿಯು 121 ಕ್ಷೇತ್ರಗಳಲ್ಲಿ ಸ್ಪರ್ಧೆಗಳಿಯಲಿದೆ. ಅದರಲ್ಲಿ ಹಿಂದೂಸ್ತಾನ್ ಅವಾಮ್ ಮೋರ್ಚಾ (ಹೆಚ್‌ಎಎಂ)ಗೆ 6 ಸೀಟುಗಳನ್ನು ಬಿಟ್ಟುಕೊಡಲಿದೆ. ಮೈತ್ರಿ ಪಕ್ಷಗಳು ಸೆಪ್ಟೆಂಬರ್ 25 ರಂದು ಕ್ಷೇತ್ರಗಳ ಹಂಚಿಕೆ ಬಗ್ಗೆ ಘೋಷಣೆ ಮಾಡುತ್ತವೆ ಎಂದು ಹೇಳಲಾಗುತ್ತಿದೆ.