ಕರ್ನಾಟಕ

karnataka

ETV Bharat / bharat

ಪ್ರವಾಹ: ಮತ್ತೆ ಆರು ಗ್ರಾಮಗಳು ಮುಳುಗಡೆ, ಎನ್‌ಡಿಆರ್‌ಎಫ್ ತಂಡ ನಿಯೋಜನೆ - ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ

ಮುಂಜಾನೆ 3.30ರ ಸುಮಾರಿಗೆ ಕಾಲುವೆಯಿಂದ ನೀರು ಹೊರಬಂದು ಆರು ಗ್ರಾಮಗಳು ಮುಳುಗಡೆಯಾಗಿವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್‌ನ ತಂಡಗಳನ್ನು ನಿಯೋಜಿಸಲಾಗಿದ್ದು, ಹತ್ತಿರದ ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

flood
flood

By

Published : Aug 3, 2020, 12:15 PM IST

ಮುಜಾಫರ್​​​ಪುರ(ಬಿಹಾರ): ಮುಜಾಫರ್​​​ಪುರ ಜಿಲ್ಲೆಯ ತಿರ್ಹುತ್ ಕಾಲುವೆಯಿಂದ ನೀರು ಹೊರಬಂದು ಆರು ಗ್ರಾಮಗಳು ಮುಳುಗಡೆಯಾಗಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಮುಜಾಫರ್​​​ಪುರದ ಮುರಾಲ್ ಬ್ಲಾಕ್ ಪ್ರದೇಶದ ಹಲವಾರು ಹಳ್ಳಿಗಳಿಗೆ ಪ್ರವಾಹದ ನೀರು ಪ್ರವೇಶಿಸಿದ್ದು, ಇದರಿಂದ ಜನರು ಪ್ರಯಾಣಿಸಲು ತೊಂದರೆ ಸೃಷ್ಟಿಯಾಗಿದೆ.

ಹೆಚ್ಚಿನ ಸ್ಥಳಗಳಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್‌ನ ತಂಡಗಳನ್ನು ನಿಯೋಜಿಸಲಾಗಿದೆ.

ಮುರಾಲ್ ಬ್ಲಾಕ್‌ನ ಪಿಲ್ಖಿ ಗ್ರಾಮದ ಬಳಿ ಮುಂಜಾನೆ 3.30ರ ಸುಮಾರಿಗೆ ಈ ಘಟನೆ ಎಂದು ಪ್ರಕಟಣೆ ತಿಳಿಸಿದೆ. ಹತ್ತಿರದ ಹಳ್ಳಿಗಳ ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಮೊಹಮ್ಮದ್‌ಪುರ ಕೋತಿ ಪಂಚಾಯತ್ ಅಡಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎನ್‌ಡಿಆರ್‌ಎಫ್) ಎರಡು ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಪ್ರಕಾರ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details