ಪಾಟ್ನಾ(ಬಿಹಾರ):13ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನ ವಿವಿಧ ಪಂದ್ಯಗಳಿಗಾಗಿ ನಡೆಸಲಾಗುತ್ತಿದ್ದ ಬೆಟ್ಟಿಂಗ್ ದಂಧೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 6 ಲಕ್ಷ ರೂ ನಗದು, ಮೊಬೈಲ್ ಪೋನ್ ಹಾಗೂ ಲ್ಯಾಪ್ಟಾಪ್ ವಶಕ್ಕೆ ಪಡೆದುಕೊಳ್ಳಲಾಗಿದೆ.
ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ... 6 ಲಕ್ಷ ನಗದು, ಲ್ಯಾಪ್ಟಾಪ್, ಮೊಬೈಲ್ ವಶಕ್ಕೆ! - Bihar Man held in IPL betting racket bust
ವಿದೇಶದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ ವಿವಿಧ ಪಂದ್ಯಗಳಿಗಾಗಿ ನಡೆಸಲಾಗುತ್ತಿದ್ದ ಬೆಟ್ಟಿಂಗ್ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಬಿಹಾರದ ಜಮ್ಲಾಪುರ್ ಪ್ರದೇಶದಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಲಾಗಿದ್ದು, ಓರ್ವ ವ್ಯಕ್ತಿಯ ಬಂಧನ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನ ಕೈಲಾಸ್ ಎಂದು ಗುರುತಿಸಲಾಗಿದ್ದು, ಇತನಿಂದ 6 ಲಕ್ಷ ರೂ ನಗದು ಹಾಗೂ ಮೊಬೈಲ್ ಹಾಗೂ ಲ್ಯಾಪ್ಟಾಪ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಇತನ ವಿರುದ್ಧ ಗ್ಯಾಮ್ಲಿಂಗ್ ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಮೌಲ್ಯದ ಬೆಟ್ಟಿಂಗ್ ದಂಧೆ ನಡೆಯುತ್ತಿದ್ದು, ಅನೇಕರು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ.