ಜೈಪುರ (ರಾಜಸ್ಥಾನ) :ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದಕ್ಕಾಗಿ ಶನಿವಾರ ರಾಜಸ್ಥಾನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಲಾಯಿತು.
ಕೋವಿಡ್ ಸಮಯದಲ್ಲಿ ಮಾಸ್ಕ್ ಕಡ್ಡಾಯ.. ರಾಜಸ್ಥಾನ ವಿಧಾನಸಭೆಯಲ್ಲಿ ಮಸೂದೆ ಮಂಡನೆ - ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿ ಮಸೂದೆ ಮಂಡನೆ
ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು, ಸಾಮಾಜಿಕ ಮತ್ತು ರಾಜಕೀಯ ಸಭೆಗಳಲ್ಲಿ ಮತ್ತು ಸಾರ್ವಜನಿಕ ಅಥವಾ ಖಾಸಗಿ ಸಾರಿಗೆಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು..
![ಕೋವಿಡ್ ಸಮಯದಲ್ಲಿ ಮಾಸ್ಕ್ ಕಡ್ಡಾಯ.. ರಾಜಸ್ಥಾನ ವಿಧಾನಸಭೆಯಲ್ಲಿ ಮಸೂದೆ ಮಂಡನೆ Bill making wearing of masks compulsory tabled in Rajasthan Assembly](https://etvbharatimages.akamaized.net/etvbharat/prod-images/768-512-9386398-871-9386398-1604202403109.jpg)
ರಾಜಸ್ಥಾನ ವಿಧಾನಸಭೆಯಲ್ಲಿ ಮಸೂದೆ ಮಂಡನೆ
ಇಂತಹ ಮಸೂದೆಯನ್ನು ಪ್ರಸ್ತಾಪಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜಸ್ಥಾನ ಪಾತ್ರವಾಗಿದೆ. ಮಾಸ್ಕ್ ಬಳಕೆಯು ಕೋವಿಡ್-19 ಹರಡುವುದನ್ನು ಗಣನೀಯವಾಗಿ ನಿಯಂತ್ರಿಸಲು ಮತ್ತು ಲಕ್ಷಾಂತರ ಜನರ ಜೀವವನ್ನು ಉಳಿಸಲು ಸಹಾಯ ಮಾಡುತ್ತದೆ ಎಂದು ವಿಶ್ವದಾದ್ಯಂತ ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ಮಸೂದೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು, ಸಾಮಾಜಿಕ ಮತ್ತು ರಾಜಕೀಯ ಸಭೆಗಳಲ್ಲಿ ಮತ್ತು ಸಾರ್ವಜನಿಕ ಅಥವಾ ಖಾಸಗಿ ಸಾರಿಗೆಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.