ಗಾಜಿಯಾಬಾದ್(ಉತ್ತರ ಪ್ರದೇಶ):ಪಿಸ್ತೂಲ್ ಮೂಲಕ ಗಾಳಿಯಲ್ಲಿ ಗುಂಡು ಹಾರಿಸಿ ತನ್ನ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ.
ನಗರದ ಸಾಹಿಬಾಬಾದ್ ನಿವಾಸಿ ಹರ್ಷ್ ಎಂಬ ಯುವಕ ತನ್ನ ಹುಟ್ಟು ಹಬ್ಬದ ಅಂಗವಾಗಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವೇಳೆ, ಪಿಸ್ತೂಲ್ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಬಳಿಕ ಇದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಲಾಗಿತ್ತು.
ಎಸ್‌ಎಸ್‌ಪಿ ಕಲಾನಿಧಿ ನೈಥಾನಿ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾದ ವಿಡಿಯೋವನ್ನು ಗಮನಿಸಿದ ಪೊಲೀಸರು, ಕೂಡಲೇ ಕ್ರಮ ಕೈಗೊಂಡು ಆತನನ್ನು ಬಂಧಿಸಿದ್ದಾರೆ.
ಈ ಬಗ್ಗೆ ಗಾಜಿಯಾಬಾದ್‌ನ ಎಸ್‌ಎಸ್‌ಪಿ ಕಲಾನಿಧಿ ನೈಥಾನಿ ಪ್ರತಿಕ್ರಿಯಿಸಿದ್ದು, ನಾವು ಈಗಾಗಲೇ ಹರ್ಷ್ ಅವರನ್ನು ಐಪಿಸಿ 363 ರ ಅಡಿಯಲ್ಲಿ ಬಂಧಿಸಿದ್ದೇವೆ ಹಾಗೂ ಇದೇ ರೀತಿ ಸೋಷಿಯಲ್ ಮೀಡಿಯಾಗಳಲ್ಲಿ ಜನರಿಗೆ ಭಯ ಹುಟ್ಟಿಸುವ ಕೆಲಸ ಮಾಡಿದವರಿಗೆ ಮತ್ತು ಅಕ್ರಮ ಶಸ್ತ್ರಾಸ್ತ್ರಗಳನ್ನು ಇರಿಸಿಕೊಂಡು ಜನರನ್ನು ಬೆದರಿಸಲು ಯತ್ನಿಸಿದವರ ಪೈಕಿ 100 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದೇವೆ ಎಂದು ಹೇಳಿದ್ದಾರೆ.
ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಕ್ರಮವಾಗಿ ಇಟ್ಟುಕೊಳ್ಳುವುದರ ವಿರುದ್ಧ ಯುವಕರಿಗೆ ಎಚ್ಚರಿಕೆ ನೀಡಿದ ನೈಥಾನಿ, ಯಾರಾದರು ನಿಯಮ ಉಲ್ಲಂಘಿಸಿರುವುದು ಕಂಡುಬಂದರೆ ಅಂಥವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.