ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಅಕ್ಟೋಬರ್ 4ರಂದು ಸಭೆ ಸೇರುತ್ತಿದೆ.
ಮೊದಲ ಹಂತದ ಬಿಹಾರ ಚುನಾವಣೆಗೆ ಅಭ್ಯರ್ಥಿಗಳ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದ್ದು, ಅಕ್ಟೋಬರ್ 8 ಅಂತಿಮ ದಿನವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ತವಾರ್ಚಂದ್ ಗೆಹ್ಲೋಟ್, ಶಿವರಾಜ್ ಸಿಂಗ್ ಚೌಹ್ವಾಣ್, ಶಹನವಾಜ್ ಹುಸೇನ್, ವಿಜಯ್ ರಹತಕರ್ ಜೊತೆಗೆ ಬಿಹಾರ ಬಿಜೆಪಿ ಉಸ್ತುವಾರಿ ಭುಪೇಂದ್ರ ಯಾದವ್, ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನಾವಿಸ್, ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಪ್ರೋಟೋಕಾಲ್ ಪ್ರಕಾರ, ಪ್ರಧಾನಿ ಮೋದಿ ಯಾವುದೇ ಸಭೆಯಲ್ಲಿ ಭಾಗವಹಿಸಲು ಮುಂದಾದ್ರೆ ಆ ಸಭೆಯಲ್ಲಿ ಪಾಲ್ಗೊಳ್ಳುವವರಿಗೆ ಕೋವಿಡ್-19 ಪರೀಕ್ಷೆ ಮಾಡಲಾಗುತ್ತದೆ. ಪರೀಕ್ಷೆಗಳಿಗೆ ಮಾದರಿಗಳನ್ನು ನೀಡಿದ ನಂತರ ಬೇರೆಯವರೊಂದಿಗೆ ಹೆಚ್ಚು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸುವಂತೆ ನಾಯಕರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯ ನಂತರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.