ನವದೆಹಲಿ:ನವೆಂಬರ್ 30ರಿಂದ ಡಿಸೆಂಬರ್ 20ರವರೆಗೆ ಐದು ಹಂತಗಳಲ್ಲಿ ನಡೆಯುವ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ನವೆಂಬರ್ 30ರಿಂದ 5 ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 23ಕ್ಕೆ ಫಲಿತಾಂಶ ಹೊರಬರಲಿದೆ. ಜಾರ್ಖಂಡ್ನ 81 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 81 ಸ್ಥಾನಗಳ ಶಾಸಕರ ಅಧಿಕಾರಾವಧಿ ಜನವರಿ 5ರಂದು ಅಂತ್ಯವಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಕಳೆದ ಲೋಕಸಭಾ ಚುನಾವಣೆಯಲ್ಲಿ 2ನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ 3ನೇ ರಾಜ್ಯದ ಚುನಾವಣೆ ಇದಾಗಿದೆ. ಈ ರಾಜ್ಯದಲ್ಲಿ ಕೂಡ ಬಿಜೆಪಿ ಅಧಿಕಾರದಲ್ಲಿದೆ. ಜಾರ್ಖಂಡ್ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ, ಮತ್ತೆ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಮೊದಲ ಹಂತದ ಮತದಾನಕ್ಕೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಿಜೆಪಿ ಬಿಡುಗಡೆ ಮಾಡಿದ ಸ್ಟಾರ್ ಪ್ರಚಾರಕರ ಪಟ್ಟಿ ಇದರಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್, ಬಿ.ಎಲ್. ಸಂತೋಷ್, ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ, ಧರ್ಮೇಂದ್ರ ಪ್ರಧಾನ್, ಸ್ಮೃತಿ ಇರಾನಿ, ಮುಖ್ತ ಅಬ್ಬಸ್ ನಖ್ವಿ ಸೇರಿ ಒಟ್ಟು 40 ಸ್ಟಾರ್ ಪ್ರಚಾರಕರಿದ್ದಾರೆ.