ನವದೆಹಲಿ:ಲೋಕಸಭಾ ಚುನಾವಣೆ ಫಲಿತಾಂಶದಸದ್ಯದ ಟ್ರೆಂಡ್ ನೋಡೋದಾದ್ರೆ ಎನ್ಡಿಎ ಮೈತ್ರಿ ಕೂಟ ಮ್ಯಾಜಿಕ್ ನಂಬರ್ ದಾಟಿಕೊಂಡು ಮುನ್ನುಗ್ಗುತ್ತಿದೆ.
ಪ್ರಮುಖವಾಗಿ ಕಾಂಗ್ರೆಸ್ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದ 29 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಇತ್ತ ರಾಜಸ್ಥಾನದಲ್ಲೂ ಬಿಜೆಪಿ ಮೇಲುಗೈ ಸಾಧಿಸಿದ್ದು 25 ಕ್ಕೆ 25 ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದೆ. ಛತ್ತಿಸ್ಗಢದ 11 ಕ್ಷೇತ್ರಗಳ ಪೈಕಿ 9 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜಾರ್ಖಂಡ್ನಲ್ಲೂ ಬಿಜೆಪಿ ಪಾರುಪತ್ಯ ಸಾಧಿಸಿದ್ದು, 14 ಕ್ಷೇತ್ರಗಳ ಪೈಕಿ 11 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಸದ್ಯದ ಲೆಕ್ಕಾಚಾರ ನೋಡೋದಾದ್ರೆ ಕಾಂಗ್ರೆಸ್ ಪಕ್ಷಕ್ಕ ಭಾರೀ ಹಿನ್ನಡೆ ಉಂಟಾಗಿದ್ದು, ಹಲವು ರಾಜ್ಯಗಳಲ್ಲಿ ಕಮಲ ಅರಳುವ ಸಾಧ್ಯತೆ ದಟ್ಟವಾಗಿದೆ.