ನವದೆಹಲಿ: ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ), ಜನತಾದಳ (ಜೆಡಿಯು) ಹಾಗೂ ಲೋಕ ಜನಶಕ್ತಿ ಪಕ್ಷ (ಎಲ್ಜಿಪಿ) ಗಳು ಮೈತ್ರಿಯಾಗಿ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆ ನೀಡಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಯು, ಎಲ್ಜಿಪಿ ಮೈತ್ರಿ: ನಡ್ಡಾ - BJP, JD(U), LJP
ಬಿಜೆಪಿ, ಜೆಡಿಯು, ಎಲ್ಜಿಪಿ ಮೈತ್ರಿಯಾಗಿ ಬಿಹಾರ ಚುನಾವಣೆ ಎದುರಿಸಲಿವೆ. ಆದರೆ ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ಇಂದು ಬಿಹಾರದ ಬಿಜೆಪಿ ಕಾರ್ಯ ಸಮಿತಿ ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಸಿದ ಸಭೆಯಲ್ಲಿ ಮಾತನಾಡಿದ ನಡ್ಡಾ, ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಎಂದಿಗೂ ಬಲವಾಗಿರುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಯು, ಎಲ್ಜಿಪಿ ಜೊತೆಗೂಡಿ ಎದುರಿಸಲಿದ್ದೇವೆ. ಆದರೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರೇ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದರು. ಕೋವಿಡ್ ಹಾಗೂ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುತ್ತಿರುವ ಬಿಹಾರ ಸರ್ಕಾರದ ಕಾರ್ಯವನ್ನು ನಡ್ಡಾ ಇದೇ ವೇಳೆ ಶ್ಲಾಘಿಸಿದರು.
ಅಕ್ಟೋಬರ್-ನವೆಂಬರ್ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ ಕೊರೊನಾ ಪರಿಸ್ಥಿತಿಯಿಂದಾಗಿ ಚುನಾವಣಾ ಆಯೋಗ ಇನ್ನೂ ಚುನಾವಣಾ ದಿನಾಂಕ ನಿಗದಿ ಮಾಡಿಲ್ಲ.