ನವದೆಹಲಿ:ಹರಿಯಾಣದಲ್ಲಿ ಕೊನೆಗೂ ಮನೋಹರ್ ಲಾಲ್ ಖಟ್ಟರ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದು, ಜನನಾಯಕ್ ಜನತಾಪಾರ್ಟಿ ಕಮಲಕ್ಕೆ ಜೈ ಎಂದಿದೆ.
90 ವಿಧಾನಸಭಾ ಕ್ಷೇತ್ರಗಳ ಪೈಕಿ ಆಡಳಿತ ಪಕ್ಷ 40 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿದರೆ, ಕಾಂಗ್ರೆಸ್ 31 ಕ್ಷೇತ್ರ, ದುಷ್ಯಂತ್ ಚೌಟಾಲ ನೇತೃತ್ವದ ಜೆಜೆಪಿ ಪಕ್ಷ 10 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿತ್ತು. ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಚೌಟಾಲ, ತಮ್ಮ ಅಜೆಂಡಾ ಬೆಂಬಲಿಸುವವರಿಗೆ ಸಪೋರ್ಟ್ ನೀಡುವುದಾಗಿ ಘೋಷಣೆ ಮಾಡಿದ್ದರು.
ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಜತೆ ಕೈ ಸೇರಿಸಲು ಮುಂದಾಗಿದ್ದಾಗಿ ಹೇಳಿಕೆ ನೀಡಿದ್ದರಿಂದ ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದೇ ವೇಳೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂದಿನ ವರ್ಷ ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿಯಾಗಿ ಸರ್ಕಾರ ನಡೆಸಲಿದ್ದು, ಹರಿಯಾಣ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಲಿವೆ ಎಂದರು.
ಅಮಿತ್ ಶಾ ಜತೆ ದುಷ್ಯಂತ್,ಖಟ್ಟರ್, ನಡ್ಡಾ ಇನ್ನು ಬಿಜೆಪಿ ಪಕ್ಷದ ಅಭ್ಯರ್ಥಿ ಸಿಎಂ ಆಗಿ, ಜೆಜೆಪಿ ಪಕ್ಷದ ಅಭ್ಯರ್ಥಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ನಾಳೆ ಚಂಡೀಗಢನಲ್ಲಿ ಅಲ್ಲಿನ ರಾಜ್ಯಪಾಲರನ್ನು ಭೇಟಿ ಮಾಡಲಿರುವ ಮನೋಹರ್ಲಾಲ್ ಖಟ್ಟರ್ ಸರ್ಕಾರ ರಚನೆ ಮಾಡಲು ಮನವಿ ಸಲ್ಲಿಕೆ ಮಾಡಲಿದ್ದಾರೆ.
ಇದೇ ವೇಳೆ ಮಾತನಾಡಿರುವ ದುಷ್ಯಂತ್ ಚೌಟಾಲ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರಿಗೆ ಧನ್ಯವಾದ ತಿಳಿಸಿದ್ದು, ಹರಿಯಾಣದ ಅಭಿವೃದ್ಧಿಗಾಗಿ ತಾವು ಬಿಜೆಪಿಗೆ ಬೆಂಬಲ ನೀಡಿದ್ದು, ಎರಡು ಪಕ್ಷ ಸೇರಿ ರಾಜ್ಯದ ಅಭಿವೃದ್ದಿಗಾಗಿ ದುಡಿಯುವುದಾಗಿ ತಿಳಿಸಿದ್ದಾರೆ.