ನವದೆಹಲಿ: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಭ್ಯ ಮಾಹಿತಿಯ ಪ್ರಕಾರ ಸೋಮವಾರ ರಾತ್ರಿಯೇ ಸಿಂಧಿಯಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಮೂವರು ವೈದ್ಯರ ತಂಡ ಅವರ ಮೇಲೆ ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.