ಇಂದೋರ್:ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್ನಿಂದ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ ಮಧ್ಯಪ್ರದೇಶದ ಬಿಜೆಪಿ ಶಾಸಕ ಆಕಾಶ್ ವಿಜಯ್ವರ್ಗಿಯಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಕ್ರಿಕೆಟ್ ಬ್ಯಾಟ್ನಿಂದ ಅಧಿಕಾರಿ ಮೇಲೆ ಹಲ್ಲೆ ಪ್ರಕರಣ: ಬಿಜೆಪಿ ಶಾಸಕನಿಗೆ ಜಾಮೀನು
ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದ ಜೈಲು ಸೇರಿದ್ದ ಬಿಜೆಪಿ ಶಾಸಕ ಆಕಾಶ್ ವಿಜಯ್ವರ್ಗಿಯಾ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಬಿಜೆಪಿ ಶಾಸಕನಿಗೆ ಜಾಮೀನು
ಸಾರ್ವಜನಿಕವಾಗಿ ಮಹಾನಗರ ಪಾಲಿಕೆ ಅಧಿಕಾರಿ ಮೇಲೆ ಹಲ್ಲೆ ಮಾಡಿದ್ದಕ್ಕೆ ವಿಜಯ್ವರ್ಗಿಯಾ ಅವರನ್ನ ಜುಲೈ 7ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪ್ರಕರಣ ಸಂಬಂಧ ಭೋಪಾಲ್ ವಿಶೇಷ ನ್ಯಾಯಾಲಯ ವಿಜಯ್ವರ್ಗಿಯಾಗೆ ಜಾಮೀನು ಮಂಜೂರು ಮಾಡಿದೆ.
ಇತ್ತ ವಿಜಯ್ವರ್ಗಿಯಾ ಬಿಡುಗಡೆಯಿಂದ ಸಂತಸಗೊಂಡಿರುವ ಅವರ ಬೆಂಬಲಿಗರು, ಬಿಡುಗಡೆ ವೇಳೆ ಜೈಲಿನ ಮುಂದೆ ಜಮಾಯಿಸಿದ್ದರು.