ನವ ದೆಹಲಿ: ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ನಿಮಿತ್ತ ಸಂಸತ್ತಿನ ಆವರಣದಲ್ಲಿ ನಡೆದ ಸ್ವಚ್ಛ ಭಾರತ ಅಭಿಯಾನದಲ್ಲಿ ಬಿಜೆಪಿ ನಾಯಕರು ಸಂಸದರು ಕೈಜೋಡಿಸಿದರು.
ಗಾಂಧೀಜಿ 150ನೇ ಜನ್ಮ ದಿನಾಚರಣೆ: ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡ ಹೇಮಾಮಾಲಿನಿ - undefined
ಮಹಾತ್ಮ ಗಾಂಧೀಜಿ 150 ನೇ ಜನ್ಮ ದಿನಾಚರಣೆ ನಿಮಿತ್ತ ಸಂಸತ್ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನದಲ್ಲಿ ರಾಜ್ಯ ಹಣಕಾಸು ಸಚಿವ ಅನುರಾಗ್ ಠಾಕೂರ್, ಬಿಜೆಪಿ ಸಂಸದೆ ಹೇಮಾ ಮಾಲಿನಿ ಸೇರಿದಂತೆ ಬಿಜೆಪಿ ಸಂಸದರು ಭಾಗವಹಿಸಿ ತಮ್ಮ ಅನುಭವ ಹಂಚಿಕೊಂಡರು.
![ಗಾಂಧೀಜಿ 150ನೇ ಜನ್ಮ ದಿನಾಚರಣೆ: ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡ ಹೇಮಾಮಾಲಿನಿ](https://etvbharatimages.akamaized.net/etvbharat/prod-images/768-512-3826211-thumbnail-3x2-kjvkdfjg.jpg)
ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗಿಯಾದ ಬಿಜೆಪಿ ನಾಯಕರು
ಹೌದು ಸಂಸತ್ತಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನದಲ್ಲಿ ರಾಜ್ಯ ಹಣಕಾಸು ಸಚಿವ ಅನುರಾಗ್ ಠಾಕೂರ್, ಬಿಜೆಪಿ ಸಂಸದೆ ಹೇಮಾ ಮಾಲಿನಿ ಸೇರಿದಂತೆ ಬಿಜೆಪಿ ಸಂಸದರು ಭಾಗವಹಿಸಿ ತಮ್ಮ ಅನುಭವ ಹಂಚಿಕೊಂಡರು.
ಇನ್ನೂ ಈ ಕುರಿತು ಮಾತನಾಡಿದ ಸಂಸದೆ ಹೇಮ ಮಾಲಿನಿ, ಸದನದ ಸ್ಪೀಕರ್ ಗಾಂಧಿಯವರ 150 ನೇ ಜನ್ಮ ದಿನಾಚರಣೆ ನಿಮಿತ್ತ ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಂಡಿರುವುದು ಶ್ಲಾಘನೀಯ. ನಾನು ಮುಂದಿನ ವಾರ ಮಥುರಾಕ್ಕೆ ಹಿಂತಿರುಗುತ್ತಿದ್ದು, ಅಲ್ಲಿಯೂ ಈ ಅಭಿಯಾನ ಮಾಡುತ್ತೇನೆ ಎಂದರು.