ಭೋಪಾಲ್:ಮಧ್ಯಪ್ರದೇಶದಲ್ಲಿ ಬಿಜೆಪಿ ಮುಖಂಡನೋರ್ವ ಮಹಿಳೆಯೋರ್ವಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿರುವ ವಿಡಿಯೋ ತುಣುಕೊಂದನ್ನು ಕಾಂಗ್ರೆಸ್ ಮುಖಂಡ ಕಮಲ್ನಾಥ್ ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡ ಕಮಲ್ನಾಥ್ ಶೇರ್ ಮಾಡಿರುವ ವಿಡಿಯೋದಲ್ಲಿ ಮಹಿಳೆಯ ಮೇಲೆ ವ್ಯಕ್ತಿಯೋರ್ವ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸುತ್ತಿದ್ದು, ಆಕೆಯನ್ನು ತಳ್ಳಾಡಿದ್ದಾನೆ. ಈ ವೇಳೆ ನಮ್ಮ ತಾಯಿಯನ್ನು ಬಿಡುವಂತೆ ಆಕೆಯ ಮಗಳು ಚೀರಾಡಿದ್ದಾಳೆ.
ಬಿತುಲ್ ಜಿಲ್ಲೆಯ ಶೋಭಾಪುರ್ದಲ್ಲಿ ದಲಿತ ಮಹಿಳೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಆಕೆಯ ಮೇಲೆ ಬಿಜೆಪಿ ಮುಖಂಡ ಹಲ್ಲೆ ಮಾಡಿದ್ದಾನೆಂದು ಕಮಲ್ ನಾಥ್ ತಮ್ಮ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.ಇಷ್ಟೊಂದು ಕ್ರೂರವಾಗಿ ನಡೆದುಕೊಂಡಿದ್ದರೂ ಪೊಲೀಸರು ಬಿಜೆಪಿ ಮುಖಂಡನ ಮೇಲೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದು, ನಿಮ್ಮ ಸರ್ಕಾರ ಆಡಳಿತ ನಡೆಸುತ್ತಿರುವಾಗ ನಮ್ಮ ಸಹೋದರಿಯರ ಮೇಲೆ ಈ ರೀತಿಯ ಕೃತ್ಯ ನಡೆಸಲಾಗುತ್ತಿದೆ ಎಂದಿದ್ದಾರೆ.