ನವದೆಹಲಿ: ಭಾರತ ತಂಡದ ಮಾಜಿ ಆರಂಭಿಕ ಕ್ರಿಕೆಟ್ ಆಟಗಾರ ಹಾಗೂ ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಸಂಸದ ಗೌತಮ್ ಗಂಭೀರ್ಗೆ ಅಂತಾರಾಷ್ಟ್ರೀಯ ನಂಬರ್ನಿಂದ ಜೀವ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಗೌತಮ್ ಗಂಭೀರ್ ಕುಟುಂಬಕ್ಕೆ ಪ್ರಾಣ ಬೆದರಿಕೆ: ರಕ್ಷಣೆ ಒದಗಿಸುವಂತೆ ಪೊಲೀಸರಿಗೆ ಮನವಿ - ಪೊಲೀಸ್ ಠಾಣೆ ಮೆಟ್ಟಿಲೇರಿದ ಗಂಭೀರ್
ಬಿಜೆಪಿ ಸಂಸದ ಹಾಗೂ ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್, ತನಗೆ ಹಾಗು ಕುಟುಂಬಕ್ಕೆ ಕಳೆದ ಕೆಲ ದಿನಗಳಿಂದ ಅಂತಾರಾಷ್ಟ್ರೀಯ ಕರೆಯಿಂದ ಪ್ರಾಣ ಬೆದರಿಕೆ ಬರುತ್ತಿದೆ ಎಂದು ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಅಂತಾರಾಷ್ಟ್ರೀಯ ನಂಬರ್ನಿಂದ ತಮಗೆ ಮೇಲಿಂದ ಮೇಲೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ನನ್ನ ಹಾಗೂ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಅವರು ಪತ್ರದಲ್ಲಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳುವಂತೆ ತಿಳಿಸಿದ್ದಾರೆ. ಗಂಭೀರ್ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪೂರ್ವ ದೆಹಲಿ ಕ್ಷೇತ್ರದಿಂದ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದರು.
ಕಳೆದೆರಡು ದಿನಗಳ ಹಿಂದೆ ನಡೆದ ಐಪಿಎಲ್ ಹರಾಜು ಪ್ರಕ್ರಿಯೆ ಬಗ್ಗೆ ಮಾತನಾಡಿದ್ದ ಅವರು, ಕೋಲ್ಕತ್ತಾ ನೈಡ್ ರೈಡರ್ಸ್ ತಂಡದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿ, ಫ್ರಾಂಚೈಸಿ ಯಾವುದೇ ಮೀಸಲು ಆಟಗಾರರನ್ನು ಖರೀದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.