ನವದೆಹಲಿ: ನೂತನವಾಗಿ ಬಿಜೆಪಿ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಮಧ್ಯಪ್ರದೇಶದ ರಾಜ್ಯಸಭಾ ಅಭ್ಯರ್ಥಿಯಾಗಿ ಬಿಜೆಪಿ ಹೆಸರಿಸಿದೆ.
ಜ್ಯೋತಿರಾದಿತ್ಯ ಸಿಂಧಿಯಾರನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಿಸಿದ ಬಿಜೆಪಿ - ಸಿಂಧಿಯಾರನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಬಿಜೆಪಿ
ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಮಧ್ಯಪ್ರದೇಶದ ರಾಜ್ಯಸಭಾ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ.

ಜ್ಯೋತಿರಾದಿತ್ಯ ಸಿಂಧಿಯಾರನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಣೆ
ಮಂಗಳವಾರವಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಿಂಧಿಯಾ ಅವರು ಮಧ್ಯಪ್ರದೇಶದ ಪ್ರಭಾವಿ ನಾಯಕರಾಗಿದ್ದು, ಇಂದು ಬಿಜೆಪಿ ಸೇರಿದ್ದಾರೆ. ಮಧ್ಯಾಹ್ನವಷ್ಟೇ ಕಮಲ ಮುಡಿದ ನೂತನ ನಾಯಕನನ್ನು ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಅಸ್ಸೋಂನ ಮಾಜಿ ಕಾಂಗ್ರೆಸ್ ಮುಖಂಡ ಭುವನೇಶ್ವರ ಕಲಿತಾ ಸೇರಿದಂತೆ ಬಿಜೆಪಿ ತನ್ನ 9 ರಾಜ್ಯಸಭಾ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮಹಾರಾಷ್ಟ್ರದ ದಲಿತ ನಾಯಕ ಮತ್ತು ಕೇಂದ್ರ ಸಚಿವ ರಾಮದಾಸ್ ಅಠವಾಳೆ ಸೇರಿದಂತೆ ಮಿತ್ರ ಪಕ್ಷಗಳಿಗೆ ಎರಡು ಸ್ಥಾನಗಳನ್ನು ನೀಡಲಾಗಿದೆ.