ಕರ್ನಾಟಕ

karnataka

ETV Bharat / bharat

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಜೆಪಿ ನಡ್ಡಾ... ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನ - undefined

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಆಯ್ಕೆಯಾಗಿದ್ದು, ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬಿಜೆಪಿ

By

Published : Jun 17, 2019, 8:02 PM IST

Updated : Jun 17, 2019, 11:37 PM IST

ನವದೆಹಲಿ:ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಆಯ್ಕೆಯಾಗಿದ್ದು, ಸಂಸದೀಯ ಮಂಡಳಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ಜೆಪಿ ನಡ್ಡಾ

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅಮಿತ್ ಶಾ ಗೃಹ ಸಚಿವರಾಗಿ ಮೋದಿ ಸಂಪುಟ ಸೇರಿದ ಹಿನ್ನಲೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ನೂತನ ಅಧ್ಯಕ್ಷರನ್ನ ಆಯ್ಕೆ ಮಾಡಿದೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಹಾಗೂ ಗೃಹ ಸಚಿವ ಅಮಿತ್​ ಶಾ ಹೂಗುಚ್ಛ ನೀಡಿ ಅಭಿನಂದಿಸಿದರು.

ಇದರ ಮಧ್ಯೆ ಪಕ್ಷದ ಮುಖ್ಯಸ್ಥರಾಗಿ ಅಮಿತ್​ ಶಾ ಮುಂದುವರೆಯುವುದಾಗಿ ಸಭೆಯಲ್ಲಿನಿರ್ಧಾರ ಕೈಗೊಳ್ಳಲಾಗಿದೆ. ಇವರ ಅಧಿಕಾರವಧಿ ಮುಂದಿನ ಆರು ತಿಂಗಳ ಕಾಲ ಇರುತ್ತದೆ. ಇದೇ ವಿಷಯವಾಗಿಮಾತನಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​,ಅಮಿತ್​ ಶಾ ನೇತೃತ್ವದಲ್ಲಿ ನಾವು ಅನೇಕ ಚುನಾವಣೆಯಲ್ಲಿ ಗೆಲುವು ದಾಖಲು ಮಾಡಿದ್ದೇವೆ. ಪ್ರಧಾನಿ ಮೋದಿಯವರು ಶಾ ಅವರನ್ನ ಗೃಹ ಸಚಿವರನ್ನಾಗಿ ಆಯ್ಕೆ ಮಾಡಿದ ಬಳಿಕ, ತಮ್ಮ ಮೇಲಿರುವ ಜವಾಬ್ದಾರಿಯನ್ನ ಬೇರೆಯವರಿಗೆ ನೀಡುವಂತೆ ಕೇಳಿಕೊಂಡಿದ್ದರು. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್​, ಕೇಂದ್ರ ಸಚಿವ ರಾಜನಾಥ್​ ಸಿಂಗ್​, ನಿತಿನ್​ ಗಡ್ಕರಿ, ತಾವರ್​ ಚಂದ ಗೆಹ್ಲೋಟ್​ ಸೇರಿದಂತೆ ಇನ್ನಿತರ ನಾಯಕರು ಪಾಲ್ಗೊಂಡಿದ್ದರು.

ಇಂದು ಆರಂಭವಾದ ಸಂಸತ್​ ಅಧಿವೇಶನದ ವೇಳೆ ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೊದಲ ಅಧಿವೇಶನ ಇದಾಗಿದ್ದು, ಇದೇ ಜುಲೈ 5 ರಂದು ಪೂರ್ಣ ಪ್ರಮಾಣದ ಬಜೆಟ್​ ಮಂಡನೆ ಆಗಲಿದೆ.ಇದಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಜ್ಜಾಗಿದ್ದಾರೆ.

Last Updated : Jun 17, 2019, 11:37 PM IST

For All Latest Updates

ABOUT THE AUTHOR

...view details