ಅಹ್ಮದಾಬಾದ್: ಲೋಕಸಭೆ ಚುನಾವಣೆ ಹಿನ್ನೆಲೆ ಗುಜರಾತ್ನ ಗಾಂಧಿನಗರ ಸಂಸದೀಯ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಅಮಿತ್ ಶಾ ಇಂದು ನಾಮಪತ್ರ ಸಲ್ಲಿಸಿದರು.
ಶಾ ನಾಮಪತ್ರ ಸಲ್ಲಿಕೆ ಹಿನ್ನೆಲೆ ಬೆಳಗ್ಗೆ ವಿಜಯ್ ಸಂಕಲ್ಪ ಸಭೆ ಆಯೋಜಿಸಲಾಗಿತ್ತು. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ನಿತಿನ್ ಗಡ್ಕರಿ, ಪಿಯೂಶ್ ಗೊಯೆಲ್, ರಾಮ್ ವಿಲಾಸ್ ಪಾಸ್ವಾನ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.