ನವದೆಹಲಿ: ಭಾರತದಲ್ಲಿ ಫೇಸ್ಬುಕ್ ಹಾಗೂ ವಾಟ್ಸಾಪ್ಗಳನ್ನು ಬಿಜೆಪಿ ಮತ್ತು ಆರ್ಎಸ್ಎಸ್ ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ಸಂಬಂಧ, ಅಮೆರಿಕನ್ ಡೈಲಿ ಪತ್ರಿಕೆಯಲ್ಲಿ ಪ್ರಕಟಗೊಂಡಿರುವ ವರದಿಯೊಂದಿಗೆ ಟ್ವೀಟ್ ಮಾಡಿರುವ ಅವರು, ತಮ್ಮ ಆರೋಪವನ್ನು ಸಮರ್ಥಿಸಿಕೊಂಡಿದ್ದಾರೆ.
ಇನ್ನೊಂದೆಡೆ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಮತದಾರರನ್ನು ಸೆಳೆಯಲು ಈ ಸಾಮಾಜಿಕ ಮಾಧ್ಯಮಗಳ ಮೂಲಕ ನಕಲಿ ಸುದ್ದಿ ಮತ್ತು ದ್ವೇಷವನ್ನು ಬಿಜೆಪಿ ಹರಡಿದೆ ಎಂದು ಆರೋಪಿಸಿದ್ದಾರೆ.
ಇದನ್ನು ಅಲ್ಲೆಗಳೆದಿರುವ ಬಿಜೆಪಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಫೇಸ್ಬುಕ್ ಡಾಟಾ ಬಳಸಿಕೊಂಡಿರುವುದು ಪತ್ತೆಯಾಗಿತ್ತು. ಆದ್ರೆ ಇದೀಗ ಬಿಜೆಪಿ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದರು.