ಜೈಪುರ:ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾಗೆ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾಗೆ ಕೊರೊನಾ
ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸ್ವತಃ ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಸತೀಶ್ ಪೂನಿಯಾಗೆ ಕೊರೊನಾ
"ಸೋಂಕಿನ ಲಕ್ಷಣಗಳು ಕಂಡು ಬರದಿದ್ದರೂ ಕೊರೊನಾ ಟೆಸ್ಟ್ ಮಾಡಿಸಿದ್ದು, ಇದೀಗ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ" ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ಇನ್ನು ಸೋಂಕಿನ ಹಿನ್ನೆಲೆಯಲ್ಲಿ ಹೋಂ ಐಸೋಲೇಶನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದಿದ್ದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.