ಡೆಹ್ರಾಡೂನ್ :ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂಬ ಆರೋಪದಲ್ಲಿ ಬಿಜೆಪಿಯ ಉತ್ತರಖಂಡ ಘಟಕವು ತನ್ನ 40 ಸದಸ್ಯರನ್ನು ಉಚ್ಛಾಟಿಸಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪ: 40 ಸದಸ್ಯರನ್ನು ಉಚ್ಛಾಟಿಸಿದ ಬಿಜೆಪಿ - ಉತ್ತರಾಖಂಡ್
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದಕ್ಕಾಗಿ ಮತ್ತು ನಡೆಯಲಿರುವ ಪಂಚಾಯತ್ ಚುನಾವಣೆಯಲ್ಲಿ ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ವಿರುದ್ಧವೇ ನಾಮಪತ್ರ ಸಲ್ಲಿಸಿದ್ದ 40 ಪದಾಧಿಕಾರಿಗಳನ್ನು ಬಿಜೆಪಿ, ಸದಸ್ಯತ್ವ ಸ್ಥಾನದಿಂದ ಉಚ್ಛಾಟನೆ ಮಾಡಿದೆ.
ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಂತೆ ಈ ಘಟನೆ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.
ರಜನೀಶ್ ಶರ್ಮಾ, ಮೀರಾ ರಾಟುರಿ, ಮೋಹನ್ ಸಿಂಗ್ ಬಿಶ್ತ್, ಮಹೇಶ್ ಬಗ್ರಿ, ಪ್ರಮೀಳಾ ಉನಿಯಾಲ್ ಸೇರಿದಂತೆ 40 ಜನರನ್ನು ಉಚ್ಛಾಟಿಸಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಭಂಡಾರಿ ತಿಳಿಸಿದ್ದಾರೆ.
ಮೇಲ್ನೋಟಕ್ಕೆ 40 ಪದಾಧಿಕಾರಿಗಳು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ವಿರುದ್ಧವೇ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಈ ಪದಾಧಿಕಾರಿಗಳನ್ನು ಪಕ್ಷದ ಹುದ್ದೆಗಳಿಂದ ತೆಗೆದುಹಾಕಲಾಗಿದೆ ಎಂದರು.
ಜುಲೈ ತಿಂಗಳಲ್ಲಿ ಬಿಜೆಪಿಯು ಪ್ರಣವ್ ಸಿಂಗ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿತ್ತು. ತನ್ನ ಬಾಯಲಿ ಮತ್ತು ಕೈಗಳಲ್ಲಿ ಬಂದೂಕು ಹಿಡಿಕೊಂಡು ನೃತ್ಯ ಮಾಡುತ್ತಿದ್ದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದು ಪಕ್ಷಕ್ಕೆ ತೀವ್ರವಾದ ಮುಜುಗರ ತರಿಸಿತ್ತು. ಆ ಬಳಿಕ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಯಿತ್ತು.