ನವದೆಹಲಿ:ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಸನ್ನದ್ಧವಾಗಿದ್ದು, ರಾಜ್ಯ ನಾಯಕರು ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿದ್ದಾರೆ.
ರಾಜ್ಯ ರಾಜಕಾರಣ ಹಾಗೂ ಸರ್ಕಾರ ರಚನೆ ಬಗ್ಗೆ ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದ ಬಿಜೆಪಿ ನಿಯೋಗ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದೆ.
ರಾಜ್ಯ ನಾಯಕರ ಭೇಟಿ ಬಳಿಕ ಇದೀಗ ಗೃಹ ಸಚಿವ ಅಮಿತ್ ಶಾ ಕಚೇರಿಯಲ್ಲಿ ಅವರದೇ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ಸದ್ಯ ನಡೆಯುತ್ತಿದೆ. ಕರ್ನಾಟಕದಲ್ಲಿ ಸರ್ಕಾರ ರಚನೆ ಬಗ್ಗೆ ಇಂದೇ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ರಾಷ್ಟ್ರೀಯ ನಾಯಕರ ಭೇಟಿ ಬಳಿಕ ಮಾತನಾಡಿದ ಜಗದೀಶ್ ಶೆಟ್ಟರ್, "ಸದ್ಯದ ರಾಜಕೀಯ ಬೆಳವಣಿಗೆ ಹಾಗೂ ಸರ್ಕಾರ ರಚನೆ ಬಗ್ಗೆ ಅಮಿತ್ ಶಾ ಹಾಗೂ ಜಗದೀಶ್ ಶೆಟ್ಟರ್ ಜೊತೆಗೆ ಮಾತನಾಡಿದ್ದೇವೆ. ಆದರೆ, ಇದೇ ವಿಚಾರದ ಕುರಿತಂತೆ ಮಧ್ಯಾಹ್ನ ಮೂರು ಗಂಟೆಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ರಚನೆ ಬಗ್ಗೆ ಪಾರ್ಲಿಮೆಂಟರಿ ಬೋರ್ಡ್ ಮೀಟಿಂಗ್ನಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ" ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ನಾಯಕರ ಭೇಟಿ ಬಳಿಕ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್