ಮುಂಬೈ:ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ ಬಿಜೆಪಿ ನಾಯಕರು ಸರ್ಕಾರ ರಚನೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್, ನಾವು ಸರ್ಕಾರ ರಚನೆ ಮಾಡುವುದಿಲ್ಲ. ಬಿಜೆಪಿ ಮತ್ತು ಶಿವಸೇನೆ ಮೈತ್ರಿಗೆ ಜನಾದೇಶ ಇತ್ತು. ಆದರೆ ಶಿವಸೇನೆ ಜನಾದೇಶ ದಿಕ್ಕರಿಸಿದೆ. ಕಾಂಗ್ರೆಸ್ ಮತ್ತು ಎನ್ಸಿಪಿ ಜೊತೆ ಸೇರಿಕೊಂಡು ಸರ್ಕಾರ ರಚನೆ ಮಾಡಿದರೆ ಅವರಿಗೆ ನಮ್ಮ ಶುಭಾಶಯಗಳು ಎಂದು ಹೇಳಿದ್ರು.
ಅಧಿಕಾರ ಹಂಚಿಕೆ ವಿಚಾರದಲ್ಲಿ ಶಿವಸೇನೆ ಮತ್ತು ಬಿಜೆಪಿ ನಡುವೆ ಒಮ್ಮತ ಮೂಡದ ಕಾರಣ ಎರಡೂ ಪಕ್ಷಗಳಲ್ಲಿ ಮೈತ್ರಿ ಸಾಧ್ಯವಾಗಲಿಲ್ಲ. ಹೀಗಾಗಿ ಯಾವ ಪಕ್ಷಕ್ಕೂ ಬಹುಮತ ಇಲ್ಲದ ಕಾರಣ ಚುನಾವಣೆ ಫಲಿತಾಂಶ ಬಂದು 15 ದಿನ ಕಳೆದರೂ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಾಧ್ಯವಾಗಿಲ್ಲ. ನಿನ್ನೆಯಷ್ಟೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚನೆ ಮಾಡುವಂತೆ ಆಹ್ವಾನ ನೀಡಿದ್ದರು.
ಆದರೆ ಬಿಜೆಪಿ ನಾಯಕರು ರಾಜ್ಯಪಾಲರ ಆಹ್ವಾನವನ್ನು ತಿರಸ್ಕರಿಸಿದ್ದು ನಾವು ಸರ್ಕಾರ ರಚನೆ ಮಾಡಲು ಸಿದ್ಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಶಿವಸೇನೆ ಪಕ್ಷದ ವಕ್ತಾರ ಸಂಜಯ್ ರಾವತ್ ಮಾತನಾಡಿದ್ದು, ಉದ್ಧವ್ ಠಾಕ್ರೆ ಶಿವಸೇನೆ ಪಕ್ಷದ ಅಭ್ಯರ್ಥಿಯೇ ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಅವರು ಹೇಳಿದ ಮೇಲೆ ಶಿವಸೇನೆ ಪಕ್ಷದ ಅಭ್ಯರ್ಥಿಯೇ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ರು.