ಕೋಲ್ಕತಾ:ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನೆಲೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಸಂಬಂಧ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬೆಂಬಲಿಗರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ಸದಸ್ಯರೊಬ್ಬರು ಮೃತಪಟ್ಟಿದ್ದಾರೆ.
ಹೂಗ್ಲಿ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸುದರ್ಶನ್ ಪ್ರಮಾಣಿಕ್ ಮೃತಪಟ್ಟ ಬಿಜೆಪಿ ಮುಖಂಡ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಮೂಲಗಳ ಪ್ರಕಾರ ಈವರೆಗೆ ಯಾರನ್ನೂ ಬಂಧಿಸಿರುವ ವರದಿಯಾಗಿಲ್ಲ.