ಬುದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಅಪರಿಚಿತ ಭಯೋತ್ಪಾದಕರು ಗುಂಡಿಕ್ಕಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ: ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ - ಬಿಜೆಪಿ ಕಾರ್ಯಕರ್ತ
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ದಾಳಿ ಪ್ರಕರಣಗಳು ಮುಂದುವರೆದಿದ್ದು, ಇಂದು ಕೂಡ ಓರ್ವ ಕಾರ್ಯಕರ್ತನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.
ಇಂದು ಬೆಳಗ್ಗೆ ಬುದ್ಗಾಮ್ ಮೊಹಿಂದ್ಪುರ ನಿವಾಸಿ ಅಬ್ದುಲ್ ಹಮೀದ್ ನಜರ್ ಮೇಲೆ ಉಗ್ರರು ಗುಂಡು ಹಾರಿಸಿದ್ದು, ಆತ ಗಾಯಗೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ನಜರ್ನನ್ನ ಆಸ್ಪತ್ರೆಗೆ ದಾಖಲಿಸಿದ್ದು, ಆತನ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಬರಬೇಕಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಅಬ್ದುಲ್ ಹಮೀದ್ ನಜರ್ ಬುದ್ಗಾಮ್ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾಧ್ಯಕ್ಷರಾಗಿದ್ದರು. ಇದಕ್ಕೂ ಮುನ್ನ ಆಗಸ್ಟ್ 6 ರಂದು ಬಿಜೆಪಿ ಸರ್ಪಂಚ್, ಸಜಾದ್ ಅಹ್ಮದ್ ಖಂಡೇ ಅವರನ್ನು ಕುಲ್ಗಂ ಬಳಿ ಅವರ ನಿವಾಸದ ಹೊರಗೆ ಅಪರಿಚಿತ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು.