ಶ್ರೀನಗರ (ಜಮ್ಮು ಮತ್ತು ಕಾಶ್ಮೀರ):ದಕ್ಷಿಣ ಕಾಶ್ಮೀರದ ಕುಲ್ಗಂ ಜಿಲ್ಲೆಯ ಕಾಜಿಗುಂಡ್‌ನ ವೈಕೆ ಪೋರಾ ಪ್ರದೇಶದಲ್ಲಿ ಸಂಜೆ ಮೂವರು ಬಿಜೆಪಿ ಕಾರ್ಯಕರ್ತರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಮೂವರು ಬಿಜೆಪಿ ಕಾರ್ಯಕರ್ತರು ಬಲಿ! - BJP worker shot dead
ಕಾಶ್ಮೀರದ ವೈಕೆ ಪೋರಾದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಹುಸೇನ್ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಇಬ್ಬರು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಸಾವು
ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ನಾಯಕ, ಕುಲ್ಗಂ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಫಿಡಾ ಹುಸೇನ್ ಇಟೂ, ಉಮರ್ ಹಜ್ಜಮ್ ಮತ್ತು ವಸೀಮ್ ಅಹ್ಮದ್ ಮೃತಪಟ್ಟಿದ್ದಾರೆ.
ವರದಿಗಳ ಪ್ರಕಾರ, ವೈಕೆ ಪೋರಾದಲ್ಲಿ ಮೂವರು ವ್ಯಕ್ತಿಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಹುಸೇನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡ ಇತರ ಇಬ್ಬರನ್ನು ಖಾಜಿಗುಂಡ್‌ನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಅವರೂ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಾಳಿಯ ಬಗ್ಗೆ ಇನ್ನಷ್ಟು ಮಾಹಿತಿ ಬರಬೇಕಿದೆ.
Last Updated : Oct 29, 2020, 10:47 PM IST