ಭಿರ್ಭುಂ (ಪಶ್ಚಿಮ ಬಂಗಾಳ) :ರಾಜ್ಯದಲ್ಲಿ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ಸಮರ ಮುಂದುವರಿದಿದೆ. ಭಿರ್ಭುಂ ಪ್ರದೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ನೇತೃತ್ವದ ಸಭೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಟಿಎಂಸಿ ಕಾರ್ಯಕರ್ತರು ಥಳಿಸಿ, ಗುಂಡು ಹಾರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ಟಿಎಂಸಿ- ಬಿಜೆಪಿ ಸಮರ: ಓರ್ವ ಸಾವು - ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ಸಮರ ಮುಂದುವರಿದಿದೆ. ಬಿಜೆಪಿ ಕಾರ್ಯಕರ್ತರಿಗೆ ಟಿಎಂಸಿ ಕಾರ್ಯಕರ್ತರು ಥಳಿಸಿ, ಗುಂಡು ಹಾರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಓರ್ವ ಸಾವು
ಘಟನೆಯಲ್ಲಿ ಓರ್ವ ಬಿಜೆಪಿ ಕಾರ್ಯಕರ್ತ ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Last Updated : Nov 25, 2020, 2:20 PM IST