ನವದೆಹಲಿ:ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಂಡಿಸಿದ್ದಾರೆ.
"ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಮತ್ತೊಮ್ಮೆ ಪ್ರಜಾಪ್ರಭುತ್ವ ನಾಚಿಕೆ ಪಡುವಂತ ಕೆಲಸ ಮಾಡಿವೆ. ಅರ್ನಾಬ್ ಗೋಸ್ವಾಮಿ ವಿರುದ್ಧ ರಾಜ್ಯದ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುವುದು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ 4ನೇ ಆಧಾರಸ್ತಂಭದ ಮೇಲಿನ ಆಕ್ರಮಣವಾಗಿದೆ. ಇದು ನಮಗೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ. ಪತ್ರಿಕಾ ಸ್ವಾತಂತ್ರ್ಯದ ಮೇಲೆ ದಾಳಿ ಮಾಡಿದೆ. ನಾವು ಇದನ್ನು ಖಂಡಿಸುತ್ತೇವೆ" ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.